SSLC ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ : ಪ್ರಶ್ನೆ ಪತ್ರಿಕೆ ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಬದಲಾವಣೆಯನ್ನು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟಿಸಿದೆ.

ಈ ಬಾರಿ ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಎರಡು ಪರೀಕ್ಷೆಗಳನ್ನು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ನಡೆಸುತ್ತಿದೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯನ್ನು ಒಳಗೊಂಡು ಒಂದು ಪ್ರಶ್ನೆ ಪತ್ರಿಕೆ ಮತ್ತು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನವನ್ನು ಒಳಗೊಂಡು ಇನ್ನೊಂದು ಪ್ರಶ್ನೆ ಪತ್ರಿಕೆಯನ್ನು ಸಿದ್ದಪಡಿಸಿದೆ. ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ಅತ್ಯಂತ ಸರಳೀಕರಣಗೊಳಿಸಲಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಬಹು ಆಯ್ಕೆಯ ಪ್ರಶ್ನೆಗಳ ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ವಿಷಯವಾರು 40 ಅಂಕಗಳನ್ನು ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲ ತಿಳಿಸಿದ್ದಾರೆ.

ಈಗಾಗಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಣ ಓಎಂಆರ್ ಗಳ ಮಾದರಿಯನ್ನ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಶಾಲೆಯ ಮುಖ್ಯಶಿಕ್ಷಕರು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳ ಅಭ್ಯಾಸಕ್ಕೆ ಕ್ರಮವಹಿಸಬೇಕು ಇನ್ನು ಭಾಷಾ ವಿಷಯಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

ಮಾದರಿ ಪ್ರಶ್ನೆ ಪತ್ರಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ :
ವೆಬ್ ಸೈಟ್ : http://sslc.karnataka.gov.in

Comments are closed.