SSLC Preparatory Examination Fee: SSLC ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕ 50 ರೂ.ಗೆ ಇಳಿಕೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: (SSLC Preparatory Examination Fee) ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕವನ್ನು ತಲಾ 60 ರೂ ಬದಲಾಗಿ 50 ರೂ. ಗೆ ಇಳಿಕೆ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ. ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಕೆಲವು ಬದಲಾವಣೆಗಳೊಂದಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಅವರು ಸೂಚಿಸಿದ್ದಾರೆ.

ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಕೆಲವು ಬದಲಾವಣೆಗಳೊಂದಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಅವರು ಸೂಚಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ದ ಪಡಿಸುವುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳ ಹಂತದಲ್ಲಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಲು ಸೂಚಿಸಲಾಗಿದೆ. ಅಲ್ಲದೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ ಕಳುಹಿಸಲು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಿ, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಹಿಂದೆ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಂದ ಪೂರ್ವ ಸಿದ್ದತಾ ಪರೀಕ್ಷೆಯ ಶುಲ್ಕವನ್ನು ತಲಾ 60 ರೂ ನಂತೆ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ಇನ್ನುಮುಂದೆ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕವನ್ನು 50 ರೂ ಅನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ist of Top Universities: ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವಿರಾ ? ಹಾಗಾದ್ರೆ ಇಲ್ಲಿದೆ ವಿಶ್ವದ 10 ಉನ್ನತ ವಿವಿಗಳ ಪಟ್ಟಿ

ಇದನ್ನೂ ಓದಿ : School Teachers Association Petition: ವಾರದಲ್ಲಿ ಐದೇ ದಿನ ಶಾಲೆ : ಶಿಕ್ಷಕರ ವೇತನ ಡಬಲ್:‌ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ

ಇದನ್ನೂ ಓದಿ : LKG Student Fail : ಶಿಕ್ಷಣ ಸಂಸ್ಥೆಯ ಎಡವಟ್ಟು: ಯುಕೆಜಿ ಮಗುವನ್ನೇ ಫೇಲ್ ಮಾಡಿದ ಶಿಕ್ಷಕ

SSLC Preparatory Examination Fee: SSLC Preparatory Examination Fee Reduced to Rs 50: Education Minister BC Nagesh

Comments are closed.