SSLC Public Exam 2023: ಇಂದಿನಿಂದ ‘SSLC’ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು : (SSLC Public Exam 2023) 2022-23 ನೇ ಸಾಲಿನ ಹತ್ತನೇ ತರಗತಿಯ ಪಬ್ಲಿಕ್‌ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದ್ದು, ಇದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಇಂದಿನಿಂದ ಪರೀಕ್ಷೆಗಳು ಆರಂಭವಾಗುವ ಹಿನ್ನಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಯಾವುದೇ ತೊಂದರೆ ಬರದಂತೆ ಪರೀಕ್ಷೆ ನಡೆಸಲು ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ.

ಇಂದು ಪ್ರಥಮ ಭಾಷೆಯಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌ ಪರೀಕ್ಷೆಗಳು ನಡೆಯಲಿದ್ದು, ರಾಜ್ಯದ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ ೧೦:೩೦ ಕ್ಕೆ ಪರೀಕ್ಷೆಗಳು ಪ್ರಾರಂಭವಾಗಿ ಮಧ್ಯಾಹ್ನ ೧:೪೫ ಕ್ಕೆ ಪರೀಕ್ಷೆ ಮುಕ್ತಾಗೊಳ್ಳಲಿದೆ ಎಂದು ಮಂಡಳಿ ಮಾಹಿತಿ ನೀಡಿದೆ.

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಗಳು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಶಾಲಾ ವಿದ್ಯಾರ್ಥಿಗಳು 7,94,611 ಆಗಿದ್ದರೇ ಪುನರಾವರ್ತಿತ ವಿದ್ಯಾರ್ಥಿಗಳು 20,750 ಆಗಿದ್ದಾರೆ. ಖಾಸಗಿ ಅಭ್ಯರ್ಥಿಗಳು 18,272. ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 8,862 ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಮೊಬೈಲ್ ಫೋನ್, ಸ್ಮಾರ್ಟ್ ಫೋನ್, ಸ್ಮಾಟ್‍ವಾಚ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಸಹ ಮೊಬೈಲ್ ಪೋನ್‍ಗಳನ್ನು ಬಳಸುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ : NEET UG 2023: ವೈದ್ಯಕೀಯ ಪ್ರವೇಶ ಪರೀಕ್ಷೆಗೆ ದಿನಗಣನೆ ಪ್ರಾರಂಭ : ಮಾರ್ಗಸೂಚಿಗಳನ್ನು ಪರಿಶೀಲಿಸಿ

ಇದನ್ನೂ ಓದಿ : SSLC Grace mark: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ಈ ಬಾರಿ ಸಿಗಲಿದೆ ಶೇ 10 ರಷ್ಟು ಗ್ರೇಸ್‌ ಮಾರ್ಕ್‌

SSLC Public Exam 2023: ‘SSLC’ Exam Starts From Today: Strict Action Around Exam Centers

Comments are closed.