ಬೆಂಗಳೂರು : ರಾಜ್ಯದಲ್ಲಿ ಪಿಯುಸಿ (ಪದವಿ ಪೂರ್ವ ಶಿಕ್ಷಣ ಮಂಡಳಿ) ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಪಿಯುಸಿ, ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಈ ಎರಡೂ ಮಂಡಳಿಗಳನ್ನು ಒಟ್ಟುಗೂಡಿಸಿ ಪ್ರಾಥಮಿಕ ಶಿಕ್ಷಣ ಪರಿಷತ್ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.


ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಶೈಕ್ಷಣಿಕ ಚಟುವಟಿಕೆ ನೋಡಿಕೊಳ್ಳಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇದೆ. ಪಿಯು ಶೈಕ್ಷಣಿಕ ಚಟುವಟಿಕೆಗಾಗಿ ಪದವಿ ಪೂರ್ವ ಶಿಕ್ಷಣ ಮಂಡಳಿ ಇದೆ. ಇಂತಹ ಎರಡು ಮಂಡಳಿಗಳನ್ನು ಒಂದೇ ಮಾಡುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, PU ಮತ್ತು SSLC ಮಂಡಳಿಗಳನ್ನು ಒಂದೇ ಮಾಡಿ ವಿಲೀನಗೊಳಿಸುವಂತೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಎರಡು ಮಂಡಳಿಗಳನ್ನು ವಿಲೀನಗೊಳಿಸಿ ಪ್ರಾಥಮಿಕ ಶಿಕ್ಷಣ ಪರಿಷತ್ ಎಂಬುದಾಗಿ ಮರು ನಾಮಕರ ಮಾಡಲಿರುವುದಾಗಿ ತಿಳಿಸಿದರು.

ಹೀಗಾಗಿ ಕೆಲವೇ ದಿನಗಳಲ್ಲಿ ಪಿಯು, ಎಸ್‌ಎಸ್‌ಎಲ್ಸಿ ಮಂಡಳಿಗಳು ವೀಲಿನಗೊಂಡು, ಪ್ರಾಥಮಿಕ ಶಿಕ್ಷಣ ಪರಿಷತ್ ಅಸ್ಥಿತ್ವಕ್ಕೆ ಬರಲಿದೆ.