SSLC, PUC ಪರೀಕ್ಷೆ ರದ್ದು : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ..?

ಬೆಂಗಳೂರು : ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡುವ ಬಗ್ಗೆ ಇದುವರಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ‌ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.‌ ಆದರೆ  ಪರೀಕ್ಷೆಯನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಅವರು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗ ಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುತ್ದದೆ. ಆದರೆ ವಿದ್ಯಾರ್ಥಿಗಳು ಯಾವುದೇ ಕಾರಣ ಕ್ಕೂ ವಿಚಲಿತರಾಗದೇ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

https://kannada.newsnext.live/corona-covid-19-vaccine-apolohealth-study-report-safe/amp/

Comments are closed.