ಅಗಸ್ಟ್ ಮೊದಲವಾರ SSLC, ಜುಲೈ ಅಂತ್ಯಕ್ಕೆ PUC ಫಲಿತಾಂಶ

0

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಜುಲೈ ಅಂತ್ಯಕ್ಕೆ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಅಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಶೀಘದಲ್ಲಿಯೇ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಹೀಗಾಗಿ ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಪ್ರಕಟಿಸುತ್ತೇವೆ. ಅಲ್ಲದೇ ಪಿಯುಸಿ ಮೌಲ್ಯಮಾಪನ ಕಾರ್ಯ ಮುಕ್ತಾಯದ ಹಂತದಲ್ಲಿದ್ದು ಜುಲೈ ಅಂತ್ಯಕ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕೊರೊನಾ ವೈರಸ್ ಸೋಂಕಿನ ಕುರಿತು ಯಾರೂ ಭಯ ಪಡುವುದು ಬೇಡ. ಆದರೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.

ರಾಜ್ಯದ ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿರುವ ಕುರಿತು ದೂರುಗಳು ಬರುತ್ತಿವೆ. ಯಾವುದೇ ಕಾರಣಕ್ಕೂ ಖಾಸಗಿ ಶಾಲೆಗಳು ಶುಲ್ಕವನ್ನು ಹೆಚ್ಚಿಸುವಂತಿಲ್ಲ. ಒಂದೊಮ್ಮೆ ಶುಲ್ಕ ಹೆಚ್ಚಳ ಮಾಡಿರುವುದು ಕಂಡು ಬಂದ್ರೆ ಅಂತಹ ಶಾಲೆಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.

Leave A Reply

Your email address will not be published.