ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರದ್ದು ಪಡಿಸಿದ ಬೆನ್ನಲ್ಲೇ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಕೊಳ್ಳಲಾಗು ವುದು ಎಂದಿದ್ದಾರೆ.
ಪರಿಸ್ಥಿತಿ ಅವಲೋಕಿಸಿ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯ ಸರಕಾರ ಪರೀಕ್ಷೆ ನಡೆಸಲು ಸಿದ್ದತೆಗಳನ್ನು ಮಾಡಿಕೊಂಡಿತ್ತು. ಆದ್ರೀಗ ಕೇಂದ್ರ ಸರಕಾರದ ನಿರ್ಧಾರ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಮೇಲೆ ನೇರ ಪರಿಣಾಮವನ್ನುಂಟು ಮಾಡಲಿದೆ.
ಇನ್ನು ಕೊರೊನಾ ಸೋಂಕಿನ ನಡುವಲ್ಲೇ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದು ಪಡಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಿಬಿಎಸ್ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡು ದಿನಗಳ ಕಾಲಾವಕಾಶ ವನ್ನು ಕೇಳಿತ್ತು. ಕೋವಿಡ್ ಪರಿಸ್ಥಿತಿ ಯನ್ನು ಗಮನದಲ್ಲಿಟ್ಟುಕೊಂಡು ಈ ಕುರಿತು ಕೇಂದ್ರ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.