ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : 10 ಮಂದಿ ಬಂಧನ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು 10 ಮಂದಿ ಆರೋಪಿಗಳನ್ನು (SSLC question paper leak Arrest) ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯದ ಬೆನ್ನಲ್ಲೇ ವಾಟ್ಸಾಪ್‌ನಲ್ಲಿ ವಿಜ್ಞಾನ ಪ್ರಶ್ನೆ ಪತ್ರಿಕೆ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಡಿಡಿಪಿಐ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಕ್ರಮಕೈಗೊಂಡಿದ್ದಾರೆ.

ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಪ್ರಾಂಶುಪಾಲ ಶ್ರೀನಿವಾಸ, ಶಿಕ್ಷಕರಾದ ಕೃಷ್ಣಮೂರ್ತಿ, ಅರ್ಜುನ್‌, ನಾಗರಾಜ್‌, ಲೋಕೇಶ್‌, ಆಲೀಂ, ಸುಬ್ರಹ್ಮಣ್ಯ, ಶ್ರೀನಿವಾಸ್‌, ಕ್ಲರ್ಕ್‌ ರಂಗೇಗೌಡ, ವಿಜಯ್‌ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

SSLC question paper leak ಎಸ್‌ಪಿಗೆ ದೂರುಕೊಟ್ಟ ಡಿಡಿಪಿಐ

ಮಾಗಡಿಯಲ್ಲಿ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕುರಿತು ಡಿಡಿಪಿಐ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳಿಗೆ ದೂರು ನೀಡಿದ್ದರು. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ವಿದ್ಯಾರ್ಥಿಗಳು ಪಿಯುಸಿಗೆ ದಾಖಲಾತಿ ಆರಂಭಿಸಿದ್ದಾರೆ. ಆದ್ರೆ ಈ ನಡುವಲ್ಲೇ ಶಾಕಿಂಗ್‌ ಸುದ್ದಿಯೊಂದು ಹೊರಬಿದ್ದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ಆರಂಭಕ್ಕೂ ಮೊದಲೇ ಸೋರಿಕೆಯಾಗಿದೆ ಅನ್ನೋ ಕುರಿತು ರಾಮನಗರ ಡಿಡಿಪಿಐ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಸಿಬ್ಬಂದಿ ರಂಗೇಗೌಡ ಎಂಬಾತ ಪ್ರಶ್ನೆ ಪತ್ರಿಕೆಗಳನ್ನು ಇತರರಿಗೆ ಶೇರ್‌ ಮಾಡಿರುವ ಕುರಿತು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಡಿಡಿಪಿಐ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ : ಕನ್ನಡದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಜ್ಞಾನ

ಇದನ್ನೂ ಓದಿ : taamboola prashne :ಏನಿದು ತಾಂಬೂಲ ಪ್ರಶ್ನೆ: ಹೇಗೆ ನಡೆಯುತ್ತೆ ಈ ಶಾಸ್ತ್ರ, ಇಲ್ಲಿದೆ ಮಾಹಿತಿ

SSLC question paper leak Arrest Magadi

Comments are closed.