SSLC question paper leak : ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಎಸ್‌ಪಿಗೆ ದೂರುಕೊಟ್ಟ ಡಿಡಿಪಿಐ

ಬೆಂಗಳೂರು : ಪಿಎಸ್‌ಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ ಇದೀಗ ಎಸ್‌ಎಸ್‌ಎಲ್‌ ಸಿ ಪ್ರಶ್ನೆ ಪತ್ರಿಕೆ (SSLC question paper leak) ಸೋರಿಕೆಯಾಗಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಮಾಗಡಿಯಲ್ಲಿ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕುರಿತು ಡಿಡಿಪಿಐ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳಿಗೆ ದೂರು ನೀಡಿದ್ದಾರೆ.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ವಿದ್ಯಾರ್ಥಿಗಳು ಪಿಯುಸಿಗೆ ದಾಖಲಾತಿ ಆರಂಭಿಸಿದ್ದಾರೆ. ಆದ್ರೆ ಈ ನಡುವಲ್ಲೇ ಶಾಕಿಂಗ್‌ ಸುದ್ದಿಯೊಂದು ಹೊರಬಿದ್ದಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ಆರಂಭಕ್ಕೂ ಮೊದಲೇ ಸೋರಿಕೆಯಾಗಿದೆ ಅನ್ನೋ ಕುರಿತು ರಾಮನಗರ ಡಿಡಿಪಿಐ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಸಿಬ್ಬಂದಿ ರಂಗೇಗೌಡ ಎಂಬಾತ ಪ್ರಶ್ನೆ ಪತ್ರಿಕೆಗಳನ್ನು ಇತರರಿಗೆ ಶೇರ್‌ ಮಾಡಿರುವ ಕುರಿತು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಡಿಡಿಪಿಐ ಮನವಿ ಮಾಡಿಕೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಬಾಲಕಿಯರು

2021-22ನೇ ಸಾಲಿನ ಎಸ್​ಎಸ್​​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಂದು ಹೊರಬಿದ್ದಿದೆ. ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,53,436 ವಿದ್ಯಾರ್ಥಿಗಳಲ್ಲಿ 81.03 ಪ್ರತಿಶತದಷ್ಟು ಬಾಲಕರು ಹಾಗೂ 90.29 ಪ್ರತಿಶತದಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು ಈ ಶೈಕ್ಷಣಿಕ ವರ್ಷದಲ್ಲಿಯೂ ಸಹ ಬಾಲಕಿಯರೇ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದಂತಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್​, ಪರೀಕ್ಷೆ ಬರೆದ 8,53,436 ವಿದ್ಯಾರ್ಥಿಗಳ ಪೈಕಿ 730,881 ಮಕ್ಕಳು ಪಾಸ್​ ಆಗಿದ್ದು, ಶೇ. 85.63 ಮಂದಿ ಈ ಬಾರಿ ಪರೀಕ್ಷೆಯಲ್ಲಿ ಉತ್ತೀರ್ಣರಾದಂತಾಗಿದೆ. 145 ಮಕ್ಕಳು 625ಕ್ಕೆ 625 ಅಂಕ ಪಡೆದಿದ್ದರೆ 309 ಮಕ್ಕಳು 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವರ್ಷ ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕ ನೀಡಿದ್ದು ಹಾಗೂ ವಿದ್ಯಾರ್ಥಿ ಸ್ನೇಹಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿದ್ದು ಇಷ್ಟೊಂದು ದಾಖಲೆ ಮಟ್ಟದಲ್ಲಿ ಫಲಿತಾಂಶ ಬರಲು ಕಾರಣ ವಾಗಿದೆ. ಪ್ರಶ್ನೆ ಪತ್ರಿಕೆಯಲ್ಲಿ 10 ಪ್ರತಿಶತ ಮಾತ್ರ ಕಷ್ಟದ ಪ್ರಶ್ನೆಗಳನ್ನು ಇಡಲಾಗಿತ್ತು. 35,931 ವಿದ್ಯಾರ್ಥಿಗಳಿಗೆ 1 ವಿಷಯದಲ್ಲಿ ಗ್ರೇಸ್​ ಅಂಕ ನೀಡಲಾಗಿದೆ. 3,940 ವಿದ್ಯಾರ್ಥಿಗಳು ಎರಡು ವಿಷಯಗಳಲ್ಲಿ ಗ್ರೇಸ್​ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ :  What Next After SSLC or 10th : ಎಸ್‌ಎಸ್‌ಎಲ್‌ಸಿ  ನಂತರ ಮುಂದೇನು?

ಇದನ್ನೂ ಓದಿ : ಇನ್ಮುಂದೇ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆಯಿಂದ ಅಧಿಕೃತ‌ ಆದೇಶ

SSLC question paper leak magadi DDPI compliant

Comments are closed.