SSLC ಪೂರಕ ಪರೀಕ್ಷೆ : ಮಹತ್ವದ ಮಾಹಿತಿ ನೀಡಿದ ಪರೀಕ್ಷಾ ಮಂಡಳಿ

0

ಬೆಂಗಳೂರು  : ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ  ಪರೀಕ್ಷಾ ಮಂಡಳಿ ಮಹತ್ವದ ಮಾಹಿತಿಯನ್ನು ನೀಡಿದೆ. ಈಗಾಗಲೇ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಆಯಾಯ ಶಾಲೆಗೆ ಸಂಬಂಧಪಟ್ಟ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಲು ಸೂಚನೆ ನೀಡಿದೆ.

ಪ್ರೌಢಶಾಲಾ ಪರೀಕ್ಷಾ ಮಂಡಳಿಯ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಿರುವ ಪ್ರವೇಶ ಪತ್ರಗಳನ್ನು ಶಾಲೆಯಿಂದ ಕಳುಹಿಸಿದ CCERR/CCEPR/NSR/NSPR ವಿದ್ಯಾರ್ಥಿಗಳ ಸಂಖ್ಯೆಗೆ ಅನುಸಾರ ಶಾಲೆಗೆ ಸಂಬಂಧಪಟ್ಟಂತೆ ಶಾಲಾ ಲಾಗಿನ್ ನಲ್ಲಿ ಮುದ್ರಿಸಿಕೊಂಡಿರುವ ಪ್ರವೇಶ ಪತ್ರಗಳ ಸಂಖ್ಯೆಗಳು ಸರಿ ಹೊಂದುತ್ತಿವೆಯೇ ಎಂದು ಪರೀಕ್ಷಿಸಬೇಕು.

ಒಂದೊಮ್ಮೆ ಸರಿ ಹೊಂದದಿದ್ದಲ್ಲಿ ಯಾವ ಅಭ್ಯರ್ಥಿಯ ಪ್ರವೇಶ ಪತ್ರ ಬಂದಿಲ್ಲವೆಂಬುದನ್ನು ಖಚಿತ ಪಡಿಸಿಕೊಂಡು ಅಗತ್ಯ ಕ್ರಮಕ್ಕಾಗಿ ಸಮರ್ಥನೆಯೊಂದಿಗೆ / ದಾಖಲೆಗಳನ್ನು ದಿನಾಂಕ 16-09-2020 ರೊಳಗೆ ಕಳುಹಿಸಲು ಸೂಚನೆ ನೀಡಿದೆ.

ಪರೀಕ್ಷಾ ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ. ಇದರಿಂದ ವಿದ್ಯಾರ್ಥಿಗೆ ಆಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದರ ಜವಾಬ್ದಾರಿ ಹೊಂದುವುದಿಲ್ಲ ಎಂದು ಪ್ರೌಢಶಾಲಾ ಪರೀಕ್ಷಾ ಮಂಡಳಿ ಸ್ಪಷ್ಟಪಡಿಸಿದೆ.

Leave A Reply

Your email address will not be published.