SSLC Result 2022 : ಮೇ 19ಕ್ಕೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವು (SSLC Result 2022) ಮೇ 19ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾದ ನಂತರದಲ್ಲಿ ಮರುದಿನ ಆಯಾಯ ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಮಾರ್ಚ್‌ 28 ರಿಂದ ಎಪ್ರಿಲ್‌ 11 ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು, ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಣೆ ಮಾಡಿದ್ದರು.

ಇನ್ನು ಕಳೆದ ವರ್ಷಗಳಿಂದಲೂ ಕೊರೊನಾ ವೈರಸ್‌ ಸೋಂಕಿನಿಂದ ಶೈಕ್ಷಣಿಕ ಚಟುವಟಿಕೆಗೆ ತೊಡಕಾಗಿತ್ತು. ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯ್ತಿರೋ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಕೆಲವೇ ಅಂಕಗಳಲ್ಲಿ ಫೇಲ್ ಆಗೋ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಮಾಡಲು ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಕೆಲವೇ ಅಂಕಗಳಲ್ಲಿ ಫೇಲಾಗುವ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಅನ್ವಯವಾಗಲಿದೆ. ಯಾವುದೇ ಮೂರು ವಿಷಯಗಳಿಗೆ ಈ ಗ್ರೇಸ್ ಅಂಕ ಅನ್ವಯವಾಗಲಿದೆ. ಈ ಮೊದಲು ಕೇವಲ ಶೇ 5 ರಷ್ಟು ಗ್ರೇಸ್ ಅಂಕ ನೀಡಲಾಗುತ್ತಿತ್ತು. ಈಗ ಮೂರು ವಿಷಯಗಳಿಗೆ ಶೇ.10ರಷ್ಟು ಗ್ರೇಸ್ ನೀಡಲು ನಿರ್ಧಾರ ಮಾಡಲಾಗಿದೆ.

ಈ ಮೊದಲು ಶೇ.5ರಷ್ಟು ಗ್ರೇಸ್ ಅಂಕ ನೀಡಲಾಗುತ್ತಿತ್ತು. ಕೋವಿಡ್ ಕಾರಣಕ್ಕೆ ಶೇ.10ಕ್ಕೆ ಏರಿಸಲಾಗಿತ್ತು. ಅದೇ ನಿಯಮವನ್ನು ಈ ವರುಷವೂ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಮೂರು ಥಿಯರಿ ಪರೀಕ್ಷೆ ಸೇರಿ 26 ಅಂಕ ಕೃಪಾಂಕ ನೀಡಲು ನಿರ್ಧಾರ ಆದರೆ ಮೂರು ವಿಷಯಗಳಲ್ಲಿ ಕೃಪಾಂಕ ನೀಡಿದರೂ ಪಾಸಾಗಲಿಲ್ಲವೆಂದರೆ ಅಂಥಹ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವುದಿಲ್ಲ.

SSLC Result 2022 : ಫಲಿತಾಂಶವನ್ನು ಪರಿಶೀಲಿಸಲು ಹಂತ ಹಂತದ ವಿವರಗಳು :

ಹಂತ 1 – ಕರ್ನಾಟಕ ಬೋರ್ಡ್ ಫಲಿತಾಂಶ ವೆಬ್‌ಸೈಟ್‌ಗೆ ಭೇಟಿ ನೀಡಿ : karresults.nic.in 2022 SSLC ಫಲಿತಾಂಶ.

ಹಂತ 2 – ಇದು 2022 ರ SSLC ವೆಬ್‌ಸೈಟ್‌ನಲ್ಲಿ Karresults nic ನ ಮುಖಪುಟವನ್ನು ತೆರೆಯುತ್ತದೆ.

ಹಂತ 3 – 10 ನೇ ಫಲಿತಾಂಶ ಕರ್ನಾಟಕ 2022 ವೆಬ್‌ಸೈಟ್‌ನಲ್ಲಿ, ಕರ್ನಾಟಕ SSLC ಎಂದು ಹೇಳುವ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 4 – ಇದು KSEEB SSLC ಫಲಿತಾಂಶ 2022 ಲಾಗಿನ್ ವಿಂಡೋಗೆ ಕಾರಣವಾಗುತ್ತದೆ.

ಹಂತ 5 – kseeb.kar.nic.in 2022 ಫಲಿತಾಂಶ ವಿಂಡೋದಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

ಹಂತ 6 – SSLC ಫಲಿತಾಂಶ 2022 ಕರ್ನಾಟಕವು ಪರದೆಯ ಮೇಲೆ ಕಾಣಿಸುತ್ತದೆ.

ಹಂತ 7 – SSLC ಫಲಿತಾಂಶ ಪರಿಶೀಲನೆಯ ನಂತರ ಪ್ರಿಂಟ್‌ಔಟ್ ಅಥವಾ ಸ್ಕ್ರೀನ್‌ಶಾಟ್ ತೆಗೆದುಕೊಳ್ಳಿ ಮತ್ತು ಭವಿಷ್ಯದ ಉಲ್ಲೇಖಗಳಿಗಾಗಿ ಅದನ್ನು ಸುರಕ್ಷಿತವಾಗಿರಿಸಿಕೊಳ್ಳಿ.

ಇದನ್ನೂ ಓದಿ : Karnataka SSLC Result 2022 : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ : ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : ಫಲಿತಾಂಶಕ್ಕೂ ಮುನ್ನ ಸಿಹಿಸುದ್ದಿ ಕೊಟ್ಟ SSLC ಬೋರ್ಡ್: ಈ ವರ್ಷವೂ ಸಿಗಲಿದೆ ಶೇಕಡಾ 10 ಗ್ರೇಸ್ ಅಂಕ

SSLC Result 2022 : Karnataka SSLC Examination Results for May 19th

Comments are closed.