Karnataka SSLC Result 2026: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 91.6% ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದೆ.

Karnataka SSLC Result 2026: ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 91.6% ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಅತ್ಯುತ್ತಮ ಸಾಧನೆ ಮಾಡಿದೆ. ವಿಶೇಷವೆಂದರೆ, ಮೊದಲ ಮೂರೂ ಸ್ಥಾನಗಳು ಕರಾವಳಿ ಕರ್ನಾಟಕದ ಜಿಲ್ಲೆಗಳ ಪಾಲಾಗಿವೆ.

ಕರ್ನಾಟಕದ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಪ್ರಥಮ ರಾಂಕ್‌ ಪಡೆದಿದ್ದಾರೆ. ರೂಪಾ, ಜಾಹ್ನವಿ, ಉತ್ಸವ ಪಾಟೀಲ್, ಭರತ್‌, ಸೌಜನ್ಯ, ಸುಖದೇವ್‌, ವೃಂದಾ ದಾಖಲೆ ನಿರ್ಮಿಸಿದ್ದಾರೆ.

Also Read :  SSLC Result 2026 : ಮುದ್ದೂರು ವಿಎಸ್‌ಎಸ್‌ನ ಕಲ್ಯಾಣಿಗೆ ರಾಜ್ಯದಲ್ಲಿ 5ನೇ ರಾಂಕ್‌, ಸತತ 100 % ರಿಸಲ್ಟ್‌

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಕರಾವಳಿ ಮೇಲುಗೈ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಈ ಬಾರಿ ದಕ್ಷಿಣ ಕನ್ನಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ಕರಾವಳಿ ಭಾಗದ ಈ ಮೂರು ಜಿಲ್ಲೆಗಳು ಸತತವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಿವೆ.

Also Read : SSLC 2026 ಪ್ರಕಟ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್‌ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಪರೀಕ್ಷೆಯಲ್ಲಿ ಈ ಬಾರಿ ಒಟ್ಟು 7,24,794 ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದು, ಶೈಕ್ಷಣಿಕ ವಲಯದಲ್ಲಿ ಸಂಭ್ರಮ ಮನೆಮಾಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರು ಬಾಲಕರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳು ಈ ಬಾರಿ ನಗರ ಭಾಗದ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡಿವೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸುವುದು ಹೇಗೆ ?

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು:karresults.nic.inkseab.karnataka.gov.inSMS ಮೂಲಕ ಪಡೆಯಲು: KAR10 <Reg Number> ಟೈಪ್ ಮಾಡಿ 56263 ಕ್ಕೆ ಸಂದೇಶ ಕಳುಹಿಸಿ.

ಅನುತ್ತೀರ್ಣರಾದವರು ಮುಂದೇನು ಮಾಡಬೇಕು ?

ಫಲಿತಾಂಶದಿಂದ ಅತೃಪ್ತರಾದ ವಿದ್ಯಾರ್ಥಿಗಳಿಗೆ ಮರು ಮೌಲ್ಯಮಾಪನ (Revaluation) ಮತ್ತು ಅಂಕಗಳ ಎಣಿಕೆಗೆ ಅರ್ಜಿ ಸಲ್ಲಿಸಲು ಮಂಡಳಿ ಅವಕಾಶ ನೀಡಿದೆ. ಹಾಗೆಯೇ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂನ್ ತಿಂಗಳಿನಲ್ಲಿ ಪೂರಕ ಪರೀಕ್ಷೆ (Exam-2) ನಡೆಸಲು ಮಂಡಳಿ ಸಿದ್ಧತೆ ನಡೆಸಿದೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ಕಡಿಮೆ ಅಂಕ ಬಂದವರು ಅಥವಾ ಅನುತ್ತೀರ್ಣರಾದವರು ಧೃತಿಗೆಡದೆ ಮುಂದಿನ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಿ.

sslc result 2026 karnataka-toppers-list dakshina kannada first

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories