SSLC ವಿದ್ಯಾರ್ಥಿಗಳಿಗೆ ಮಹತ್ವದ ಆದೇಶ : ಪೋಷಕರಿಗೆ ರಿಲೀಫ್ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ‌ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕೊರೊನಾ‌ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ 6ನೇ ತರಗತಿಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಎಸ್ಎಸ್ಎಲ್‌ಸಿ ತರಗತಿಗಳು ಎಂದಿನಂತೆಯೇ ನಡೆಯುತ್ತಿದೆ‌. ಆದರೆ ತರಗತಿಗಳಿಗೆ ಹಾಜರಾತಿ ಕಡ್ಡಾಯವಲ್ಲವೆಂದು ಆದೇಶದಲ್ಲಿ ಸರಕಾರ‌ ಹೇಳಿತ್ತು. ಆದರೆ ಕೆಲವು ಕಡೆಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯ ಹಾಜರಾತಿಗೆ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಲಯ ಅಧಿಕಾರಿಗಳು ಸೂಚಿಸುತ್ತಿದ್ದಾರೆ.

ಹೀಗಾಗಿ ಇದೀಗ ಶಿಕ್ಷಣ ಇಲಾಖೆ ‌ಹೊಸ ಆದೇಶವನ್ನು ಹೊರಡಿಸಿದ್ದು, ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲವೆಂದು ಹೇಳಿದೆ. ಹೀಗಾಗಿ ಪೋಷಕರು ಬಯಸಿದಲ್ಲಿ ವಿದ್ಯಾರ್ಥಿಗಳು‌ ಮನೆಯಲ್ಲಿಯೇ ಉಳಿದುಕೊಳ್ಳಬಹುದಾಗಿದೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಶಿಕ್ಷಣ‌ ಇಲಾಖೆ ಈ ಆದೇಶ ಹೊರಡಿಸಿದೆ.

Comments are closed.