SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಮುಖ್ಯ ಪರೀಕ್ಷೆ ಬರೆಯದವರಿಗೆ ಮತ್ತೊಂದು ಅವಕಾಶ

0

ಬೆಂಗಳೂರು : ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗದೇ ಉಳಿದಿರುವ ವಿದ್ಯಾರ್ಥಿಗಳಿಗೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತೊಂದು ಅವಕಾಶವನ್ನು ಕಲ್ಪಿಸಿದೆ. ಸಪ್ಟೆಂಬರ್ 21 ರಿಂದ ಸಪ್ಟೆಂಬರ್ 29ರ ವರೆಗೆ ಪೂರಕ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕೊರೊನಾ ವೈರಸ್ ಸೋಂಕು ಹಾಗು ಆರೋಗ್ಯದ ಸಮಸ್ಯೆಯಿಂದ ಮುಖ್ಯ ಪರೀಕ್ಷೆಗೆ ಹಾಜರಾಗದೇ ಉಳಿದಿರುವ ವಿದ್ಯಾರ್ಥಿಗಳಿಗೆ ಇದು ಮೊದಲ ಅವಕಾಶವೆಂದೇ ಪರಿಗಣಿಸಲಾಗುತ್ತಿದೆ. ಅಲ್ಲದೇ ಇಂತಹ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಮುಖ್ಯ ಪರೀಕ್ಷೆಯಲ್ಲಿ ಅನುತೀರ್ಣರಾಗಿರುವ ವಿದ್ಯಾರ್ಥಿಗಳು ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಪೂರಕ ಪರೀಕ್ಷೆಯು ಬೆಳಗ್ಗೆ 10.30ರಿಂದ ಆರಂಭಗೊಳ್ಳಲಿದೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಕೈಗೊಂಡಿರುವ ರೀತಿಯಲ್ಲಿಯೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ :
ಸೆ.21: ಗಣಿತ, ಸಮಾಜಶಾಸ್ತ್ರ, ಸೆ.22: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ), ಸೆ.23: ಸಮಾಜಶಾಸ್ತ್ರ, ಸೆ.24: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ), ಸೆ.25: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು), ಎನ್​ಎಫ್​ಕ್ಯೂಅಫ್ ಪರೀಕ್ಷೆಗಳು.

ಸೆ.26: ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ, ಸೆ.28: ಬೆಳಗ್ಗೆ -ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಸೆ.29: ಜೆಟಿಎಸ್ ಪ್ರಾಯೋಗಿಕ ಪರೀಕ್ಷೆ.

Leave A Reply

Your email address will not be published.