ನಾಳೆಯಿಂದ ರಾಜ್ಯದಲ್ಲಿ SSLC ಪೂರಕ ಪರೀಕ್ಷೆ : ಇಲಾಖೆಯಿಂದ ಮಹತ್ವದ ಮಾಹಿತಿ

0

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ಪ್ರೌಢಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಸಪ್ಟೆಂಬರ್ 21ರಿಂದ 28ರ ವರೆಗೆ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10.30ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷೆಗೆ ಕೈಗೊಂಡ ರೀತಿಯಲ್ಲಿಯೇ ವಿದ್ಯಾರ್ಥಿಗಳಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ
ಸೆ.21 ಗಣಿತ, ಸಮಾಜಶಾಸ್ತ್ರ
ಸೆ.22 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಸೆ.23 ಸಮಾಜಶಾಸ್ತ್ರ
ಸೆ.24 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಸೆ. 25 ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಸೆ. 26 ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ
ಸೆ. 28 ಬೆಳಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

Leave A Reply

Your email address will not be published.