ಬೆಂಗಳೂರು : Bag less day :ವಿದ್ಯಾರ್ಥಿಗಳು ಬೇಸಿಗೆ ರಜೆಯ (summer holiday 2025 ) ಮಜಾ ಅನುಭವಿಸುತ್ತಿದ್ದಾರೆ. ಬೇಸಿಗೆ ರಜೆ ವಿಸ್ತರಣೆಯ ಸುದ್ದಿ ಹರಿದಾಡುತ್ತಿದ್ದು, ಶಿಕ್ಷಣ ಇಲಾಖೆ ಈ ಕುರಿತು ಸ್ಪಷ್ಟನೆಯನ್ನು ನೀಡಿದೆ. ಈ ನಡುವಲ್ಲೇ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಗುಡ್‌ನ್ಯೂಸ್ ಕೊಟ್ಟಿದೆ.
ಕರ್ನಾಟಕದಲ್ಲಿನ ಶಾಲಾ ಮಕ್ಕಳ ಶಿಕ್ಷಣ ಹೊರೆಯನ್ನು ಇಳಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಇನ್ಮುಂದೆ ಶನಿವಾರ ವಿದ್ಯಾರ್ಥಿಗಳಿಗೆ ಬ್ಯಾಗ್ ರಹಿತ ದಿನಾಚರಣೆಯನ್ನು ಆಚರಿಸಲು ಮುಂದಾಗಿದೆ. ಈ ದಿನಗಳಲ್ಲಿ ವಿದ್ಯಾರ್ಥಿಗಳು ಪಾಠದ ಬದಲು ಪಠ್ಯೇತರ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದಾಗಿದೆ.
ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಯ ಬದಲು ಶನಿವಾರದಂದು ತಂತ್ರಜ್ಞಾನ, ಕೈಗಾರಿಕೆ, ಪ್ರಾಕೃತಿಕ ಪಾಠ, ಕೌಶಲ್ಯ ಆಧಾರಿತ ಶಿಕ್ಷಣ ಸೇರಿ ಹಲವು ವಿಚಾರಗಳನ್ನು ತಿಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಕುರಿತು ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ ಪ್ರಾಂಶುಪಾಲರಿಗೆ ಸೂಚನೆಯನ್ನು ನೀಡಿದೆ.
ಇದನ್ನೂ ಓದಿ : Drone attack : ಉಡುಪಿ : ಪಾದೂರು ತೈಲ ಸಂಗ್ರಹಾಲಯದ ಮೇಲೆ ಡ್ರೋನ್ ದಾಳಿ
ಪ್ರತೀ ತಿಂಗಳ ಒಂದು ಶನಿವಾರದಂದು ವಿದ್ಯಾರ್ಥಿಗಳು ತಮ್ಮನ್ನು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 10 ಶನಿವಾರದಂದು ಈ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳು ಬ್ಯಾಗ್ ಮರೆತು ಶಾಲೆಗೆ ತೆರಳಲು ಅವಕಾಶವಿದೆ. 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬ್ಯಾಗ್ ರಹಿತ ದಿನದ ಪ್ರಯೋಜನ ಪಡೆಯಬಹುದಾಗಿದೆ.
summer holiday 2025 ಮೇ 29ಕ್ಕೆ ಶಾಲಾರಂಭ : ಶಿಕ್ಷಣ ಇಲಾಖೆ ಸ್ಪಷ್ಟನೆ
ಶಾಲಾ ಮಕ್ಕಳು ಬೇಸಿಗೆ ರಜೆ ಮೇ 28ಕ್ಕೆ ಮುಕ್ತಾಯವಾಗಲಿದೆ. ಮೇ 29ರಿಂದ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಲಿದೆ. ಈ ನಡುವಲ್ಲೇ ಬೇಸಿಗೆ ರಜೆ ವಿಸ್ತರಣೆ ಆಗಿದೆ ಅನ್ನೋ ಸುದ್ದಿಗಳು ಹರಿದಾಡುತ್ತಿದೆ. ಇದು ಪೋಷಕರಲ್ಲಿ ಗೊಂದಲ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆ ಸ್ಪಷ್ಟನೆಯನ್ನು ಕೊಟ್ಟಿದೆ.
ಇದನ್ನೂ ಓದಿ : Summer Holiday 2025 : ಶಾಲಾ ಮಕ್ಕಳ ಬೇಸಿಗೆ ರಜೆಯಲ್ಲಿ ಮಹತ್ವದ ಬದಲಾವಣೆ
ರಾಜ್ಯಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಎಲ್ಲಾ ಸರಕಾರಿ, ಖಾಸಗಿ ಹಾಗೂ ಬೋರ್ಡ್‌ಗೆ ಒಳಪಟ್ಟ ಶಾಲೆಗಳ ಬೇಸಿಗೆ ರಜೆ ಮೇ 28ಕ್ಕೆ ಮುಕ್ತಾಯವಾಗಲಿದೆ. ಮೇ 29ರಿಂದಲೇ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
summer holiday 2025 Good News for Students Bag less day in Saturday NCRT New Rules in Kannada News