Teacher Suspended : ತಿಲಕವಿಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಥಳಿತ : ಶಿಕ್ಷಕ ಅಮಾನತ್ತು

ಜಮ್ಮುಕಾಶ್ಮೀರ : ಹಣೆಯ ಮೇಲೆ ತಿಲಕವಿಟ್ಟು ಶಾಲೆಗೆ ಬಂದಿರುವ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರಿಗೆ ಶಿಕ್ಷಕರೊಬ್ಬರು ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಿಕ್ಷಕನನ್ನು (Teacher Suspended) ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಿಡ್ಲ್‌ ಸ್ಕೂಲ್‌ ಖದುರಿಯನ್‌ ಪಂಚಾಯತ್‌ ವ್ಯಾಪ್ತಿಯ ಇಬ್ಬರು ವಿದ್ಯಾರ್ಥಿನಿಯರು ತಿಲಕವಿಟ್ಟು ಶಾಲೆಗೆ ಬಂದಿದ್ದಾರೆ. ಈ ವೇಳೆಯಲ್ಲಿ ಶಿಕ್ಷಕ ನಿಸಾರ್‌ ಅಹಮದ್‌ ಎಂಬವರೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದಾರೆ. ಶಿಕ್ಷಕ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದನ್ನು ಗಮನಿಸಿದ ರಜೌರಿ ಜಿಲ್ಲೆಯ ಜಿಲ್ಲಾಧಿಕಾರಿಗಳು ತಕ್ಷಣವೇ ಶಿಕ್ಷಕರನ್ನು ಅಮಾನತುಗೊಳಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ 323, 235, 352 ಮತ್ತು 506ರ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬಹುದಾಗಿದೆ. ಜೊತೆಗೆ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆಯ ಅಡಿಯಲ್ಲಿಯೂ ಶಿಕ್ಷೆಗೆ ಗುರಿಪಡಿಸಬಹುದಾಗಿದೆ. ಹೀಗಾಗಿ ಇದೀಗ ಶಿಕ್ಷಕನ ವಿರುದ್ದವೂ ಪ್ರಕರಣ ದಾಖಲಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ : ಜೂನ್ 16 -18 ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ : ಟಿಪ್ಪು ಮಾತ್ರವಲ್ಲ ಯಾರ ವೈಭವಿಕರಣಕ್ಕೂ ಅವಕಾಶವಿಲ್ಲ

Teacher Suspended for Corporal Punishment In Jammu Kashmir

Comments are closed.