ಮೇ 4ರ ವರೆಗೆ ಶಿಕ್ಷಕರಿಗೂ ರಜೆ ಘೋಷಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾದ ಹಿನ್ನೆಲೆ ಯಲ್ಲಿ ರಾಜ್ಯದಾದ್ಯಂತ ಎಲ್ಲಾ ಶಿಕ್ಷಕರಿಗೂ ಎಪ್ರಿಲ್ 22ರಿಂದ ಮೇ 4ರ ವರೆಗೆ ರಜೆಯನ್ನು ಘೋಷಿಸಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.

ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಇಂದಿನಿಂದ ಹೊಸ ಆದೇಶ ಜಾರಿಗೆ ಬಂದಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸ ಲಾಗಿದ್ದು, ಭೌತಿಕ ತರಗತಿಗಳನ್ನು ನಡೆಸದಂತೆ ಸೂಚನೆಯನ್ನು ನೀಡಲಾಗಿದೆ.

ಅಲ್ಲದೇ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಗಳಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿತ್ತು. ಆದರೆ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಈವರೆಗೆ ಪೂರೈಸಿದ ಶೈಕ್ಷಣಿಕ ಚಟುವಟಿಕೆ ಗಳನ್ನು ಆಧರಿಸಿ ಶಾಲಾ ಹಂತದಲ್ಲಿ ಎಪ್ರಿಲ್ 30ರ ಒಳಗೆ ಮೌಲ್ಯಾಂಕನ ನಿರ್ವಹಿಸಿ, ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ಸೂಚಿಸಲಾಗಿತ್ತು. ಆದರೆ ಈ ಕಾರ್ಯ ವನ್ನು ಎಪ್ರಿಲ್ 26ರ ಒಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಮೇ 4ರ ವರೆಗೆ ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗುವುದರಿಂದಲೂ ವಿನಾಯಿತಿ ನೀಡಲಾಗಿದೆ.

ಇನ್ನು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ  ಆನ್ ಲೈನ್ ಮತ್ತು ದೂರವಾಣಿಯ ಮೂಲಕ ಸಂಪರ್ಕದಲ್ಲಿದ್ದು ವಿದ್ಯಾರ್ಥಿಗಳ ಸಮಸ್ಯೆಯನ್ನು ಪರಿಹಾರ ಮಾಡು ವಂತೆಯೂ ಸೂಚನೆಯನ್ನು ನೀಡಲಾಗಿದೆ. 

Comments are closed.