ಭಾನುವಾರ, ಏಪ್ರಿಲ್ 27, 2025
Homeeducationಶಾಲಾ ಶಿಕ್ಷಕರ ನೇಮಕಾತಿ : ಇನ್ನೊಂದು ವಾರದಲ್ಲಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಶಾಲಾ ಶಿಕ್ಷಕರ ನೇಮಕಾತಿ : ಇನ್ನೊಂದು ವಾರದಲ್ಲಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

- Advertisement -

ಬೆಂಗಳೂರು: (Teachers recruitment) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.

ಈ ಹಿಂದೆ ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು.

ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ ಪರಿಷ್ಕರಿಸಲು ತೀರ್ಮಾನಿಸಲಾಗಿತ್ತು. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸುವಂತೆ ಕೋರಿ 40ಕ್ಕೂ ಅಧಿಕ ಶಿಕ್ಷಕ ಹುದ್ದೆ ಆಕಾಂಕ್ಷಿ ಮಹಿಳಾ ಅಭ್ಯರ್ಥಿಗಳು ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಹಿಂದಿನ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ : UKG student fail case: ಆಕ್ರೋಶಕ್ಕೆ ಮಣಿದ ಶಿಕ್ಷಣ ಸಂಸ್ಥೆ: ಫೇಲ್‌ ಆಗಿದ್ದ ಯುಕೆಜಿ ವಿದ್ಯಾರ್ಥಿ ಪಾಸ್‌

ಇದನ್ನೂ ಓದಿ : ರಾಜ್ಯದ ವಸತಿ ಶಾಲೆಯಗಳಲ್ಲಿ ಪಿಯುಸಿ ವರೆಗೆ ಶಿಕ್ಷಣ : ಕೋಟ ಶ್ರೀನಿವಾಸ ಪೂಜಾರಿ

ಈ ಹಿಂದೆ ಪ್ರಕಟಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬದಲು ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿ ರಚಿಸುವಂತೆ ಸರಕಾರ ಮತ್ತು ಶಿಕ್ಷಣ ಇಲಾಖೆಗೆ ಕೋರ್ಟ್‌ ನಿರ್ದೇಶನ ನೀಡಿತ್ತು.

Teachers recruitment: School teacher recruitment: Release of revised provisional selection list in another week

RELATED ARTICLES

Most Popular