ಬೆಂಗಳೂರು : ರಾಜ್ಯ ಸರಕಾರ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಜೂನ್ 30 ರಿಂದಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳ ಲಿದ್ದು, ಅಂದು ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಡ್ಡಾಯ ವರ್ಗಾವಣೆ ನೀತಿಯಿಂದ ಶಿಕ್ಷಕರಿಗೆ ಸಾಕಷ್ಟು ಸಮಸ್ಯೆ ಯಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಎರಡೂ ಸದನದಲ್ಲಿಯೂ ಕಾಯ್ದೆ ತಿದ್ದುಪಡಿಗೆ ಅನುಮೋದನೆ ದೊರೆತಿದೆ. ಈ ಹಿನ್ನೆಲೆ ಯಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುತ್ತಿದೆ ಎಂದರು.
ಕಡ್ಡಾಯವಾಗಿ ವರ್ಗಾವಣೆಯಾಗಿರುವ ಶಿಕ್ಷಕರಿಗೆ ಅವಕಾಶ ದೊರೆಯಲಿದೆ. ಈಗಾಗಲೇ 75 ಸಾವಿರ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಆಧ್ಯತೆ ನೀಡಲಾಗುತ್ತಿದ್ದು, ನಂತರ ಎರಡನೇ ಹಂತದಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿ ಶಿಕ್ಷಕರು ಕೌನ್ಸಿಲಿಂಗ್ ಗಾಗಿ ಶಿಕ್ಷಣ ಇಲಾಖೆಯ ಕಚೇರಿಗೆ ತೆರಳುವ ಅಗತ್ಯವಿಲ್ಲ. ಶಿಕ್ಷಕ ಮಿತ್ರ ಆಪ್ ಮೂಲಕವೇ ಕೌನ್ಸಿಲಿಂಗ್ ನಡೆಸಲಾಗುತ್ತಿದ್ದು, ಶಿಕ್ಷಕರು ತಮ್ಮಿಷ್ಟದ ಸ್ಥಳವನ್ನು ತೆಗೆದುಕೊಳ್ಳ ಬಹುದಾಗಿದೆ ಎಂದಿದ್ದಾರೆ.