ಬೆಂಗಳೂರು : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳನ್ನು ಅಗಸ್ಟ್ 15ರ ಒಳಗಾಗಿ ಆರಂಭಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಶಿಕ್ಷಕರ ವರ್ಗಾವಣೆಯ ಕುರಿತು ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರ ಜೊತೆಗೆ ಸಭೆ ನಡೆಸಿದ್ದಾರೆ. ಶಿಕ್ಷಕರು ಹಲವು ಸಮಯ ಗಳಿಂದಲೂ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡುವುದನ್ನೇ ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ ಎಲ್ಲಾ ತಾಂತ್ರಿಕ ಸಿದ್ದತೆಗಳನ್ನು ಪೂರ್ಣಗೊಳಿಸಿಕೊಂಡು ವರ್ಗಾವಣೆ ಪ್ರಕ್ರಿಯೆಗೆ ಶೀಘ್ರದಲ್ಲಿಯೇ ಚಾಲನೆ ನೀಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈ ಬಾರಿಯ ವರ್ಗಾವಣೆ ಶಿಕ್ಷಕ ಸ್ನೇಹಿಯಾಗಿರಲಿದೆ. ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆಯ ಶಿಕ್ಷೆಗೆ ಒಳಗಾಗಿದ್ದ ಶಿಕ್ಷಕ ಸಮುದಾಯಕ್ಕೆ ಈ ಸಾಲಿನ ವರ್ಗಾವಣಾ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆ ನೀಡಲು ಸೂಚನೆಯನ್ನು ನೀಡಲಾಗಿದೆ.

ಶೀಘ್ರ ವರ್ಗಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಇಲಾಖೆಯ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಅವರು ತಾಕೀತು ಮಾಡಿದರು.