ಬೆಂಗಳೂರು : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜುಲೈ31ರ ವರೆಗೆ ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕೋವಿಡ್ ವೈರಸ್ ಸೋಂಕು ಹರಡುತ್ತಿರುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ದಿಯ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬೇಕು.

ಎಸ್ಎಸ್ಎಲ್ ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಯಾಗಿರುವ ಸಿಬ್ಬಂದಿ ಮತ್ತು ಕೋವಿಡ್ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸಿಬ್ಬಂದಿಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳು, ಬೋಧಕೇತರ ಸಿಬ್ಬಂದಿ, ಸಂಶೋಧಕರು, ಗುತ್ತಿಗೆ, ಗೌರವ ಶಿಕ್ಷಕರು ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿಗಳು ವರ್ಕ್ ಪ್ರಂ ಹೋಮ್ ಕೈಗೊಳ್ಳುವಂತೆ ಸೂಚಿಸಲಾಗಿದೆ.