ಸಮವಸ್ತ್ರ​ ವಿವಾದ : ಹೈಕೋರ್ಟ್​ ವಿಚಾರಣೆ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿಕೆ

ಬೆಂಗಳೂರು : ರಾಜ್ಯದ ಕಾಲೇಜುಗಳಲ್ಲಿ ಸಮವಸ್ತ್ರದ ವಿವಾದಕ್ಕೆ ಕಾರಣವಾಗಿರುವ ಹಿಜಬ್​ ಹಾಗೂ ಕೇಸರಿ ಶಾಲು ನಡುವಿನ ಜಟಾಪಟಿ ಹೈಕೋರ್ಟ್ ಮೆಟ್ಟಿಲೇರಿದೆ. ಇಂದು ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್​ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ (High Court postponed hearing) ಮುಂದೂಡಿದೆ.

ಮತಾಂಧತೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯದ ವಿವಿಧ ಕಾಲೇಜುಗಳಲ್ಲಿ ಉಂಟಾಗಿರುವ ಹಿಜಾಬ್​ ಹಾಗೂ ಕೇಸರಿ ಶಾಲು ವಿವಾದವು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಶಿವಮೊಗ್ಗ, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟವನ್ನೂ ಮಾಡಿದ್ದಾರೆ.

ಹಿಜಬ್​ ಧರಿಸಲು ಸರ್ಕಾರ ವಿಧಿಸಿರುವ ನಿರ್ಬಂಧವನ್ನು ಪ್ರಶ್ನಿಸಿ ಉಡುಪಿಯ ವಿದ್ಯಾರ್ಥಿನಿಯರು ಹಾಗೂ ಪೋಷಕರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಸಂಬಂಧ ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ಬೆಳಗ್ಗೆ 11:30ಕ್ಕೆ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಬಳಿಕ ಊಟದ ವಿರಾಮವನ್ನು ಘೋಷಿಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ವಿಚಾರಣೆಯನ್ನು ಮಧ್ಯಾಹ್ನ 2:30ಕ್ಕೆ ಮುಂದೂಡಿದ್ದರು. ಊಟದ ವಿರಾಮ ಮುಗಿಯುತ್ತಿದ್ದಂತೆ ವಿಚಾರಣೆ ಮತ್ತೆ ಆರಂಭವಾಗಿತ್ತು. ಸಮವಸ್ತ್ರ ವಿವಾದ ಸಂಬಂಧ ವಾದ – ಪ್ರತಿವಾದಗಳನ್ನು ಆಲಿಸಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್​ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2 :30ಕ್ಕೆ ಮುಂದೂಡಿದ್ದಾರೆ.

ಈ ನಡುವೆ ಹೈಕೋರ್ಟ್​ನಲ್ಲಿ ವಿಚಾರಣೆಯ ಬೆನ್ನಲ್ಲೇ ರಾಜ್ಯದ ವಿವಿಧ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ಸಂಬಂಧ ನಡೆದ ಹೊಡೆದಾಟ ಹಾಗೂ ಕಲ್ಲು ತೂರಾಟವನ್ನು ತಪ್ಪಿಸಲು ಪೊಲೀಸರು ಅಲ್ಲಲ್ಲಿ ಲಘು ಲಾಠಿಚಾರ್ಜ್​ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡ ನಾಳೆಯಿಂದ ಮೂರು ದಿನಗಳ ಕಾಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

The High Court postponed hearing at 2:30 pm tomorrow





Comments are closed.