ಉಡುಪಿ : ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ (Udupi School College Holiday) ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ನಿನ್ನೆಯಷ್ಟೇ ಅಪರ ಜಿಲ್ಲಾಧಿಕಾರಿಗಳು ಅತೀ ಹೆಚ್ಚು ಮಳೆ ಸುರಿಯುತ್ತಿರುವ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದರು. ಆದ್ರೆ ಇಂದು ಕಳೆದ ರಾತ್ರಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಕಳೆದೊಂದು ವಾರದಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದ್ರಲ್ಲೂ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ, ಮಂಗಳೂರು ನಗರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿನ್ನೆ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಆದ್ರೆ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಳೆಯಿಂದ ಯಾವುದೇ ಸಮಸ್ಯೆಗಳು ಉಂಟಾಗದಂತೆ ಸುರಕ್ಷತಾ ಕ್ರಮವನ್ನು ಕೈಗೊಳ್ಳುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಎಲ್ಲಾ ಪದವಿ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : PSI Recruitment Scam : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನ
ಇದನ್ನೂ ಓದಿ : Roshan’s dead body found : ಮರವಂತೆ ಬೀಚ್ಗೆ ಕಾರು ಬಿದ್ದ ಪ್ರಕರಣ : ನಾಪತ್ತೆಯಾಗಿದ್ದ ರೋಷನ್ ಮೃತದೇಹ ಪತ್ತೆ
Udupi School College Holiday Declare Dc Kurma rao Order