ಯುಜಿಸಿಇಟಿ ದಾಖಲೆ ಅಪ್‌ಲೋಡ್‌ ಪ್ರಕ್ರಿಯೆ ತಾತ್ಕಾಲಿಕ ಮುಂದೂಡಿಕೆ

0

ಬೆಂಗಳೂರು : ಜೆಇಇ (ಜಂಟಿ ಪ್ರವೇಶ ಪರೀಕ್ಷೆ ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿ ಇಟಿ) ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ.

ಈ ಹಿಂದೆ ಸಿಇಟಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ತಮ್ಮ ದಾಖಲೆಗಳನ್ನು ಆನ್ ಲೈನ್ ಮೂಲಕ ಅಪ್ಲೋಡ್ ಮಾಡಲು ಅವಕಾಶ ವನ್ನು ಕಲ್ಪಿಸಲಾಗಿತ್ತು. ಆದರೆ ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಚಿವ ಡಾ.ಅಶ್ವತ್ಥ ನಾರಾಯಣ ಅವರು, ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸ ಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದ್ದಾರೆ.

Leave A Reply

Your email address will not be published.