UPSC Civil Service final result : ನಾಗರಿಕ ಸೇವಾ ಪರೀಕ್ಷೆಗಳ ಅಂತಿಮ ಫಲಿತಾಂಶ ಪ್ರಕಟ : ಶ್ರುತಿ ಶರ್ಮಾ ಪ್ರಥಮ

UPSC Civil Service final result : ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು 2021ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಶ್ರುತಿ ಶರ್ಮಾ ಅಗ್ರಸ್ಥಾನವನ್ನು ಪಡೆದಿದ್ದಾರೆ. ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ 685 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.


ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದ ಶ್ರುತಿ ಶರ್ಮಾ ಸೇಂಟ್ ಸ್ಟೀಫನ್ಸ್ ಕಾಲೇಜು ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿನಿಯಾಗಿದ್ದು, ಜಾಮಿಯಾ ಮಿಲಿಯಾ ಇಸ್ಲಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯಲ್ಲಿ UPSC ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ.


ಅಂದಹಾಗೆ ಶ್ರುತಿ ಶರ್ಮಾ ಈ ಪರೀಕ್ಷೆಯಲ್ಲಿ ಟಾಪರ್​ ಆಗಿ ಹೊರಹೊಮ್ಮಿದ್ದರೆ ಅಂಕಿತಾ ಅಗರ್ವಾಲ್​ ಹಾಗೂ ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಹಾಗೂ ಮೂರನೇ ಅಂಕವನ್ನು ಸಂಪಾದಿಸಿದ್ದಾರೆ. ನಾಲ್ಕನೇ ಸ್ಥಾನವನ್ನು ಐಶ್ವರ್ಯಾ ವರ್ಮಾ ಎಂಬವರು ಪಡೆದುಕೊಂಡಿದ್ದಾರೆ. ಈ ಮೂಲಕ 2021ನೇ ಸಾಲಿನ ಯುಪಿಎಸ್​ಸಿ ಪರೀಕ್ಷೆಯ ಮೊದಲ ನಾಲ್ಕು ಸ್ಥಾನಗಳನ್ನು ಮಹಿಳೆಯರೇ ಪಡೆದಂತಾಗಿದೆ.


UPSC CSE ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 10, 2021 ರಂದು ನಡೆಸಲಾಯಿತು ಮತ್ತು ಪರೀಕ್ಷೆಯ ಫಲಿತಾಂಶಗಳನ್ನು ಅಕ್ಟೋಬರ್ 29 ರಂದು ಬಿಡುಗಡೆ ಮಾಡಲಾಯಿತು. ಮುಖ್ಯ ಪರೀಕ್ಷೆಯನ್ನು ಜನವರಿ 7 ರಿಂದ 16, 2022 ರವರೆಗೆ ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಮಾರ್ಚ್ 17, 2022 ರಂದು ಘೋಷಿಸಲಾಯಿತು. ಸಂದರ್ಶನವು ಕೊನೆಯ ಸುತ್ತಿನ ಪರೀಕ್ಷೆಯಾಗಿದ್ದು, ಏಪ್ರಿಲ್ 5 ರಂದು ಪ್ರಾರಂಭವಾಯಿತು ಮತ್ತು ಮೇ 26 ರಂದು ಮುಕ್ತಾಯವಾಯಿತು.ಅಭ್ಯರ್ಥಿಗಳು upsc.gov.inನಲ್ಲಿ ತಮ್ಮ ಫಲಿತಾಂಶ ವೀಕ್ಷಿಸಬಹುದಾಗಿದೆ.

ಇದನ್ನು ಓದಿ : ಕುಂದಾಪುರ ಶಿಲ್ಪಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ : ಸಾವಿನ ಹಿಂದೆ ಲವ್‌ ಜಿಹಾದ್‌ ಆರೋಪ

ಇದನ್ನೂ ಓದಿ : bjp leader balachandran killed : ಭದ್ರತಾ ಸಿಬ್ಬಂದಿ ಟೀ ವಿರಾಮಕ್ಕೆ ತೆರಳಿದ್ದ ವೇಳೆ ಬಿಜೆಪಿ ನಾಯಕನ ಬರ್ಬರ ಹತ್ಯೆ

UPSC Civil Service final result 2021 declared; Shruti Sharma is the topper

Comments are closed.