ರಂಜಾನ್ ನಿಮಿತ್ತ ಉರ್ದು ಶಾಲೆಗಳ ತರಗತಿ ಅವಧಿ ಪರಿಷ್ಕರಣೆ : ಮಧ್ಯಾಹ್ನದವರೆಗೆ ಮಾತ್ರ ತರಗತಿ
ಫೆಬ್ರವರಿ 17ರಿಂದ ಆರಂಭಗೊಳ್ಳಲಿರುವ ಪವಿತ್ರ ರಂಜಾನ್ ಮಾಸದ ಉಪವಾಸ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾ ಉರ್ದು ಶಾಲೆಗಳ ಸಮಯ ಬದಲಾವಣೆಗೊಳಿಸಿ ಆದೇಶ ಹೊರಡಿಸಿದೆ. ಉರ್ದು ಕಿರಿಯ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 12.45ರವೆಗೆ ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಇದು ಮಾರ್ಚ್ 20ರವರೆಗೆ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪಠ್ಯಕ್ರಮಗಳನ್ನು ಪೂರ್ಣಗೊಳಿಸಲು ಇತರೆ ದಿನಗಳು ಅಥವಾ ರಜಾ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೇ ರಂಜಾನ್ ಉಪವಾಸದಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಉಪವಾಸದ ವೇಳೆ 30 ನಿಮಿಷಕ್ಕೂ ಮೊದಲು ಶಾಲೆಯಿಂದ ಹೊರಡಲು ಅವಕಾಶ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ: ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ
2025-26ನೇ ಸಾಲಿನ ಎಸ್.ಎಸ್.ಎಲ್ಸಿ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷೆಯಲ್ಲಿ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ.



