ಬೆಂಗಳೂರು : ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಮುಂದಿನ 10 ದಿನದೊಳಗೆ ಕೊರೊನಾ ಲಸಿಕೆ ನೀಡಲಾಗುವುದು. ಎಲ್ಲಾ ವಿದ್ಯಾರ್ಥಿ ಗಳಿಗೆ ಲಸಿಕೆ ನೀಡುವ ಜವಾಬ್ದಾರಿಯನ್ನು ಆಯಾ ಕಾಲೇಜು ಪ್ರಾಂಶುಪಾಲರಿಗೆ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವಥ್ನಾರಾಯಣ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 18 ವರ್ಷ ಮೀರಿದ ಎಲ್ಲ ಕಾಲೇಜು ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬ್ಬಂದಿಗಳು ಲಸಿಕೆ ಪಡೆಯಲೇ ಬೇಕು, ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯ ವಾಗಿ ಒಂದು ಡೋಸ್ ಲಸಿಕೆಯನ್ನಾದ್ರೂ ಪಡೆದಿರಲೇ ಬೇಕು. ಇಲ್ಲವಾದರೆ ಕಾಲೇಜು ಪ್ರವೇಶ ನಿರಾಕರಿಸಲಾಗುವುದು ಎಂದಿದ್ದಾರೆ.

ರಾಜ್ಯ ಸರಕಾರ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಮುಂದಿನ 10 ದಿನದೊಳಗೆ ರಾಜ್ಯದ ಎಲ್ಲ ಕಾಲೇಜು ವಿದ್ಯಾರ್ಥಿ ಗಳಿಗೆ ಲಸಿಕೆ ನೀಡಲಾಗುವುದು. ಲಸಿಕೆಯಿಂದ ಯಾವುದೇ ವಿದ್ಯಾರ್ಥಿಯು ವಂಚಿರಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಆಯಾಯ ಕಾಲೇಜುಗಳ ಪ್ರಾಂಶುಪಾಲರಿಗೆ ವಹಿಸಲಾಗಿದೆ ಎಂದಿದ್ದಾರೆ.