ಹಿಜಾಬ್ ಧರಿಸಲು ಶಾಲೆ, ಕಾಲೇಜುಗಳಲ್ಲಿ ಅವಕಾಶವಿಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : (Wearing hijab not allowed schools) ಕರ್ನಾಟಕದ ಶಾಲೆ, ಕಾಲೇಜುಗಳಲ್ಲಿ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶದಂತೆ ಹಿಜಾಬ್ ಧರಿಸಲು ಅವಕಾಶವಿಲ್ಲ. ಹೈಕೋರ್ಟ್ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂದಿದೆ. ಹೀಗಾಗಿ ನ್ಯಾಯಾಲಯದ ಆದೇಶವನ್ನು ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪಾಲನೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಉತ್ತಮ ಆದೇಶದ ನಿರೀಕ್ಷೆಯಿತ್ತು. ಆದ್ರೆ ಇದೀಗ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಹೀಗಾಗಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಉತ್ತಮ ಆದೇಶ ನೀಡಲಿದೆ ಎಂದಿದ್ದಾರೆ.

ವಿದ್ಯಾರ್ಥಿಗಳು ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಯ ಒಳಗೆ ಪ್ರವೇಶವನ್ನು ಅವಕಾಶವನ್ನು ನೀಡುವುದಿಲ್ಲ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವವರೆಗೂ ಕೂಡ ಹೈಕೋರ್ಟ್ ಆದೇಶ ಮುಂದುವರಿಕೆಯಾಗಲಿದೆ. ಸ್ತ್ರಿ ಸ್ವಾತಂತ್ರ್ಯದ ಬಗ್ಗೆ ಶಿಕ್ಷಣ ವ್ಯವಸ್ಥೆಯನ್ನು ಸುವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ ಉತ್ತಮ ಆದೇಶ ಬರುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೆವು ಎಂದಿದ್ದಾರೆ.

ಹಿಜಾಬ್ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ : ಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ನ್ಯಾಯಮೂರ್ತಿ ಯರು ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಜೆಐ ವಿಸ್ತ್ರತ ಪೀಠಕ್ಕೆ ವರ್ಗಾವಣೆ‌ ಮಾಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಹುಟ್ಟಿಕೊಂಡಿದ್ದ ಹಿಜಾಬ್ ವಿವಾದ ದೇಶದಾದ್ಯಂತ ಸಂಚಲನವನ್ನು ಮೂಡಿಸಿತ್ತು. ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲೀಂ ವಿದ್ಯಾರ್ಥಿನಿಯರು ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಶೈಕ್ಷಣಿಕ ಸಂಸ್ಥೆಯಲ್ಲಿ ಹಿಜಾಬ್ ಧರಿಸಲು ಅನುಮತಿಯನ್ನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಮುಸ್ಲೀಂ ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಹಾಗೂ ನ್ಯಾ.ಸುಧಾಂಶು ಅವರು ವಿಭಿನ್ನ ತೀರ್ಪನ್ನು ಪ್ರಕಟಿಸಿದ್ದಾರೆ.

ನ್ಯಾ.ಹೇಮಂತ್ ಗುಪ್ತಾ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಸ್ಲೀಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಆದರೆ ನ್ಯಾ.ಸುಧಾಂಶು ಅವರು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ವಜಾಗೊಳಿಸಿದೆ. ಇಬ್ಬರೂ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಜೆಐ ವಿಸ್ತ್ರತ ಪೀಠಕ್ಕೆ ವರ್ಗಾವಣೆಯನ್ನು ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : Yashasvini Yojana : ಮತ್ತೆ ಆರಂಭವಾಯ್ತು ಯಶಸ್ವಿನಿ ಯೋಜನೆ: ನೋಂದಣಿ , ಅರ್ಹತೆ ಬಗ್ಗೆ ಇಲ್ಲಿದೆ ಮಾಹಿತಿ

ಇದನ್ನೂ ಓದಿ : Karnataka hijab ban : ಶಾಲೆ, ಕಾಲೇಜಲ್ಲಿ ಹಿಜಾಬ್ ಗೆ ಅವಕಾಶವಿಲ್ಲ, ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Wearing hijab is not allowed in schools and colleges Education Minister BC Nagesh

Comments are closed.