ಕೊರೊನಾ ಅಬ್ಬರ : 10, 12ನೇ ತರಗತಿಯ ಪರೀಕ್ಷೆ ರದ್ದು …!

ಕೊಲ್ಕತ್ತಾ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಇನ್ನೂ ಶೈಕ್ಷಣಿಕ ವರ್ಷ ಆರಂಭಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರಕಾರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಪಶ್ಚಿಮ ಬಂಗಾಳದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳನ್ನು ಎದುರಿಸದೇ ಸಾಮಾನ್ಯ ಪರೀಕ್ಷೆಗಳನ್ನು ಬರೆದು ಕನಿಷ್ಠ ಅಂಕಗಳಿಂದ ಉತ್ತೀರ್ಣರಾದರೆ ಸಾಕು ಎಂದು ಸರಕಾರ ಹೇಳಿದೆ.

ದೇಶಾದ್ಯಾಂತ ಕಾಲೇಜುಗಳನ್ನು ಆರಂಭಿಸಲು ಈಗಾಗಲೇ ಯುಜಿಸಿ ಕೊರೊನಾ ನಿಯಂತ್ರಣ ಮತ್ತು ನಿರ್ವಹಣೆಯ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಪಶ್ಚಿಮ ಬಂಗಾಳದಲ್ಲಿ ನವೆಂಬರ್ 15ರ ಬಳಿಕ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಅವರು ತಿಳಿಸಿದ್ದಾರೆ.

Comments are closed.