Ayanur Manjunath resigned BJP : ಬಿಜೆಪಿಗೆ ಮತ್ತೊಂದು ಶಾಕ್‌ : ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ

ಶಿವಮೊಗ್ಗ : (Ayanur Manjunath resigned BJP) ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್‌ ವಿಚಾರಕದಲ್ಲಿ ಬಂಡಾಯದ ಬಿರುಗಾಳಿ ಜೋರಾಗಿಯೇ ಬೀಸಿದೆ. ಟಿಕೆಟ್‌ ಕೈ ತಪ್ಪಿದ ಹಿನ್ನಲೆ ಹಾಲಿ ಶಾಸಕರು ಪಕ್ಷ ತೊರೆಯುತ್ತಿದ್ದು, ಇದೀಗ ಬಿಜೆಪಿಯ ನಾಯಕ ಶಿವಮೊಗ್ಗದ ಟಿಕೆಟ್‌ ಆಕಾಂಕ್ಷಿ ಆಯನೂರು ಮಂಜುನಾಥ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಶಿವಮೊಗ್ಗದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್‌ ಚುನಾವಣೆಗೂ ಮೊದಲೇ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಯಾರೆಂಬುದು ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್‌ ಸಿಗುವ ಬಗ್ಗೆ ಯಾವುದೇ ನಂಬಿಕೆಯೂ ಇಲ್ಲ. ಈ ಕಾರಣಕ್ಕೆ ಮಂಜುನಾಥ್‌ ರಾಜೀನಾಮೆ ಘೋಷಿಸಿದ್ದಾರೆ. ಇಂದು ಬೆಳಿಗ್ಗೆನೆ ಪತ್ರಿಕಾಗೋಷ್ಠಿ ನಡೆಸಿದ ಆಯನೂರು ಮಂಜುನಾಥ್‌ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ಇದರ ಜೊತೆಗೆ ತಾನೂ ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಸಿವುದಾಗಿ, ಯಾವ ಪಕ್ಷ ಎಂಬುದನ್ನು ಮಧ್ಯಾಹ್ನದ ನಂತರದಲ್ಲಿ ತಿಳಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವೆ. ಟಿಕೆಟ್​ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ ಎಂಬುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ; ನಾಲ್ವರು ಅರೆಸ್ಟ್

ಈಶ್ವರಪ್ಪ ಕಣದಲ್ಲಿ ಇದ್ದರೆ ನಾನು ಕೊಡುವ ಲೆಕ್ಕ ತುಂಬಾ ಇದೆ. ಆ ಲೆಕ್ಕ ಈ ಚುನಾವಣೆಯಲ್ಲಿ ಕೊಡುತ್ತೇನೆ. ಯಡಿಯೂರಪ್ಪ ಪರ ಹೇಳಿಕೆ ನೀಡಿದ ಏಕೈಕ ವ್ಯಕ್ತಿ ನಾನು. ಅವರ ಮೇಲೆ ಆರೋಪ ಸಮಸ್ಯೆಗಳು ಬಂದಾಗ ನಾನು ಒಬ್ಬನೇ ಅವರ ಪರ ಉತ್ತರ ಕೊಟ್ಟಿದ್ದೆ. ಮಹಾನಗರ ಪಾಲಿಕೆ ಕಮೀಷನ್ ದಂಧೆ ಬಗ್ಗೆ ಯಾರು ಧ್ವನಿ ಎತ್ತಲಿಲ್ಲ ಎಂದು ಪರೋಕ್ಷವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : Pramod Muthalik Net Worth : ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಮೋದ್‌ ಮುತಾಲಿಕ್‌ ಆಸ್ತಿ ಮೌಲ್ಯ ಎಷ್ಟು ಗೊತ್ತಾ ?

ಇದನ್ನೂ ಓದಿ : ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ : ಹಲವು ಕಾಂಗ್ರೆಸ್‌ ನಾಯಕರಿಗೆ ಐಟಿ ಶಾಕ್‌

Ayanur Manjunath resigned BJP: Another shock for BJP: Ayanur Manjunath resignation announcement

Comments are closed.