Bhupendra Patel: ಎರಡನೇ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಭೂಪೇಂದ್ರ ಪಟೇಲ್

ಗುಜರಾತ್:‌ (Bhupendra Patel) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಡಿಸೆಂಬರ್ 12ರಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಕಾಂಗ್ರೆಸ್‌ನ ಡಾ. ಅಮೀ ಯಾಗ್ನಿಕ್ ಅವರಿಗಿಂತ 50,000 ಮತಗಳ ಮುನ್ನಡೆ ಸಾಧಿಸಿ, ಭೂಪೇಂದ್ರ ಪಟೇಲ್ ಗೆಲುವು ಕಂಡಿದ್ದಾರೆ.

ಘಟ್ಲೋಡಿಯಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಕಾಂಗ್ರೆಸ್‌ನ ಡಾ. ಅಮೀ ಯಾಗ್ನಿಕ್ ಅವರಿಗಿಂತ 50,000 ಮತಗಳ ಮುನ್ನಡೆ ಸಾಧಿಸಿ, ಗೆಲುವು (Bhupendra Patel) ಕಂಡಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಶುಭಾಶಯ ಕೋರಿದ್ದಾರೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಭೂಪೇಂದ್ರ ಪಟೇಲ್ ಅವರು ಶೇ. 80.86ರಷ್ಟು ಮತಗಳನ್ನು ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಮಿ ಯಾಗ್ನಿಕ್ ಶೇ. 9.81ರಷ್ಟು ಮತಗಳನ್ನು ಪಡೆದು ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಹಾಗೇ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಜಯ್ ಪಟೇಲ್ ಶೇ. 6.73ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಭೂಪೇಂದ್ರ ಪಟೇಲ್ ಅವರು 2017ರಲ್ಲಿ 1.17 ಲಕ್ಷ ಮತಗಳ ಭಾರೀ ಅಂತರದಿಂದ ಈ ಸ್ಥಾನವನ್ನು ಗೆದ್ದಿದ್ದರು. ಈ ಚುನಾವಣೆಯ ನಂತರ ಭೂಪೇಂದ್ರ ಪಟೇಲ್ ಅವರನ್ನೇ ಮತ್ತೆ ಮುಖ್ಯಮಂತ್ರಿಯಾಗಿ ನೇಮಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ. ಹೀಗಾಗಿ, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಭೂಪೇಂದ್ರ ಪಟೇಲ್ ಅವರ ಹಾದಿ ಸುಗಮವಾದಂತಾಗಿದೆ.

ಇದನ್ನೂ ಓದಿ : Himachalpradesh election result 2022: ಸೆರಾಜ್‌ ಕ್ಷೇತ್ರದಲ್ಲಿ ಗೆಲುವು ಕಂಡ ಕರ್ನಾಟಕದ ಅಳಿಯ

ಇದನ್ನೂ ಓದಿ : Gujarat Election Result 2022: ಗುಜರಾತ್​ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಬಿಜೆಪಿ

(Bhupendra Patel) Gujarat Chief Minister Bhupendra Patel, who has seen a landslide victory in the Assembly elections, will take oath as the Chief Minister of the state for the second time on December 12. Prime Minister Narendra Modi and Home Minister Amit Shah will attend the event. Congress Dr. Bhupendra Patel has won by 50,000 votes over Ami Yagnik.

Comments are closed.