200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಮಾಸಿಕ 2,000ರೂ. ಕಾಂಗ್ರೆಸ್ ಪ್ರನಾಳಿಕೆಯಲ್ಲಿ ಏನೇನಿದೆ ?

ಬೆಂಗಳೂರು‌ : ಕರ್ನಾಟಕ ವಿಧಾನಸಭಾ ಚುನಾವಣೆ ಇನ್ನೂ ಕೆಲವು ದಿನಗಳಷ್ಟೇ ಬಾಕಿ ಉಳಿದಿದೆ. ಮೇ 10 ರಂದು ನಡೆಯಲಿರುವ ಕರ್ನಾಟಕ ಚುನಾವಣೆಗೆ ಕಾಂಗ್ರೆಸ್ ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು (Congress Releases Poll Manifesto) ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ, ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಕಾಂಗ್ರೆಸ್‌ ಪ್ರನಾಳಿಕೆಯಲ್ಲೇನಿದೆ ?

  • ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​
  • ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ
  • ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.
  • ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ
  • ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ
  • ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ
  • ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ
  • ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ
  • ಆದ್ಯತೆಯ ಮೇರೆಗೆ ಕಾಲ ಕಾಲಕ್ಕೆ ಎಲ್ಲಾ ಖಾಲಿ ಹುದ್ದೆಗಳ ಭರ್ತಿ
  • ನಾಲ್ಕು ವರ್ಷದೊಳಗೆ ಎಲ್ಲಾ ಪೊಲೀಸ್ ಸಿಬ್ಬಂದಿಗೂ ವಸತಿ ಸೌಲಭ್ಯ
  • ನೀರಾವರಿಗಾಗಿ ಮುಂದಿನ 5 ವರ್ಷಗಳಲ್ಲಿ 1.50ಲಕ್ಷ ಕೋಟಿ ರೂ.
  • ಕನಕಪುರದಲ್ಲಿ ಅತ್ಯಾಧುನಿಕ ವಿಶ್ವ ದರ್ಜೆಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
  • ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ
  • ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು
  • ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.
  • ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ
  • ಒಂದೇ ವೇದಿಕೆ ಅಡಿ ಸಾರಿಗೆ ವಿದ್ಯುತ್ ವಸತಿ ಒಳಚರಂಡಿ, ನೀರು ಸರಬರಾಜು ಸೌಕರ್ಯ
  • ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ರಾತ್ರಿ 1 ಗಂಟೆ ತನಕ ಬಸ್ ವ್ಯವಸ್ಥೆ
  • NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ
  • ಸರ್ಕಾರದಿಂದಲೇ ಮನೆಗಳ ನಿರ್ಮಾಣ
  • ಮಂಗಳಮುಖಿರಿಗಾಗಿ ಮಂಡಳಿ ಸ್ಥಾಪನೆ (100 ಕೋಟಿ ಅನುದಾನ)
  • ಆಟೋ ಚಾಲಕರ ಮಂಡಳಿ ಹಾಗೂ ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ
  • ಪತ್ರಕರ್ತರ ಕಲ್ಯಾಣ ನಿಧಿಗೆ 500 ಕೋಟಿ ರೂ ಮೀಸಲು (
  • SC-ST ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ದ.
  • ಒಂದು ಬಾರಿಯ ನೆರವಿನ ರೂಪದಲ್ಲಿ ಬೀದಿ ವ್ಯಾಪಾರಿಗಳಿಗೆ 20 ಸಾವಿರ ಅನುದಾನ
  • ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ.
  • ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ
  • ವಿಶೇಷ ಚೇತನರಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ಶಾಲೆ ಸ್ಥಾಪನೆ.
  • ಅಂಗವಿಕಲ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ 3 ಲಕ್ಷದವರೆಗೂ ಬಡ್ಡಿ ರಹಿತ ಸಾಲ.
  • ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ (ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ. ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ, ಹಿಂದುಳಿದ ವರ್ಗಗಳ ಜನಗಣತಿ ವರದಿ ಅನುಷ್ಠಾನ)

ಇದನ್ನೂ ಓದಿ : ಕನಕಪುರ, ವರುಣಾ ಬಿಜೆಪಿ ಟಾರ್ಗೆಟ್: ಸಿದ್ದು, ಡಿಕೆಶಿ ಸೋಲಿಸಲು ಬಿಜೆಪಿ ಮಾಸ್ಟರ್‌ ಫ್ಲ್ಯಾನ್‌

ಇದನ್ನೂ ಓದಿ : Ramya Campaign : ಪ್ರಿಯಾಂಕಾ ಗಾಂಧಿ ಜೊತೆ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕ್ಯಾಂಪೇನ್ : ಮಂಡ್ಯ ರಣಕಣದಲ್ಲಿ ಸ್ಟಾರ್ ಹವಾ

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಹಾಲಿ ಬಿಜೆಪಿಯಿಂದ 707 ಮತ್ತು ಕಾಂಗ್ರೆಸ್‌ನಿಂದ 651 ಅಭ್ಯರ್ಥಿಗಳೊಂದಿಗೆ ಒಟ್ಟು 3,632 ಅಭ್ಯರ್ಥಿಗಳು ಕಣದಲ್ಲಿದ್ದು, 1,720 ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ.

Congress Releases Poll Manifesto: 200 units of free electricity, free bus travel for women, Rs 2,000 per month. What is in the Congress manifesto?

Comments are closed.