Congress third list : ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : (Congress third list) ರಾಜ್ಯ ರಾಜಕೀಯದಲ್ಲಿ ಸದ್ಯ ಟಿಕೇಟ್ ಲಿಸ್ಟ್ ಭರ್ಜರಿ ಸದ್ದು ಮಾಡುತ್ತಿದೆ. ಜೆಡಿಎಸ್ ಒಂದು ಲಿಸ್ಟ್‌ ಬಿಡುಗಡೆ ಮಾಡಿದರೆ, ಕಾಂಗ್ರೆಸ್ ಎರಡು ಲಿಸ್ಟ್ ಬಿಡುಗಡೆ ಮಾಡಿ ಕುತೂಹಲ ತಣಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಕಾಂಗ್ರೆಸ್‌ ತನ್ನ 224 ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಲಾಗಿತ್ತು. ನಂತರದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲು ಹಲವು ಕಸರತ್ತುಗಳನ್ನು ನಡೆಸಿತ್ತು. ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಇಂದು ಮೂರನೇ ಹಂತದ ಪಟ್ಟಿಯನ್ನು ಕೂಡ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು.ಕಾಂಗ್ರೆಸ್‌ ಪಕ್ಷ ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಅಳೆದು ತೂಗಿ ನಿನ್ನೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ಎರಡನೇ ಹಂತದಲ್ಲಿ ಒಟ್ಟು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್‌ ಮಾಡಲಾಗಿದೆ. ಉಳಿದಂತೆ ಬಿಜೆಪಿ ಟಿಕೆಟ್‌ ಪ್ರಕಟಗೊಂಡ ನಂತರ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಕೊನೆಗೂ ಎರಡನೇ ಹಂತದಲ್ಲಿ ಕಾಂಗ್ರೆಸ್‌ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಮೂರನೇ ಪಟ್ಟಿ ಬಿಡುಗಡೆ ಸಾಧ್ಯತೆಯಿದೆ.

ಇನ್ನೂ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಬೈಂದೂರು ಕ್ಷೇತ್ರಕ್ಕೆ ಕೆ.ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರಕ್ಕೆ ಮೊಳಹಳ್ಳಿ ದಿನೇಶ್‌ ಹೆಗ್ಡೆ, ಕಾಪು ಕ್ಷೇತ್ರಕ್ಕೆ ವಿನಯ ಕುಮಾರ್‌ ಸೊರಕೆ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಉಡುಪಿ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿರಲಿಲ್ಲ. ಅದ್ರಲ್ಲೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಾರೀ ಪೈಪೋಟಿ ಏರ್ಪಟ್ಟಿತ್ತು. ಭಾರೀ ಪೈಪೋಟಿಯ ನಡುವೆಯೂ ಉಡುಪಿ ಕ್ಷೇತ್ರಕ್ಕೆ ಮೊಗವೀರ ಸಮುದಾಯದ ಪ್ರಸಾದ್‌ ಕಾಂಚನ್‌ ಅವರನ್ನು ಕಾಂಗ್ರೆಸ್‌ ಕಣಕ್ಕೆ ಇಳಿಸಿದೆ. ಇನ್ನೂ ಕರಾವಳಿಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಇನ್ನೂ ಕೂಡ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು, ಮೂರನೇ ಪಟ್ಟಿಯಲ್ಲಿ ಅಂತಿಮವಾಗಲಿದೆ.

ಇದನ್ನೂ ಓದಿ : BJP Candidates List : ಬಿಜೆಪಿಯಲ್ಲಿ ಅಂತಿಮ ಹಂತಕ್ಕೆ ಟಿಕೇಟ್ ಸರ್ಕಸ್: ದೆಹಲಿ ತಲುಪಿದ ಪಟ್ಟಿ ಹಾಗೂ ಅಭ್ಯರ್ಥಿಗಳು

ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯನವರ ಕೋಲಾರ ಕ್ಷೇತ್ರ ಕೂಡ ಎರಡನೇ ಪಟ್ಟಿಯಲ್ಲಿ ಸಸ್ಪೆನ್ಸ್‌ ಆಗಿಯೇ ಉಳಿದಿದೆ. ಸಿದ್ದರಾಮಯ್ಯ ಅವರು ಈಗಾಗಲೇ ವರುಣಾದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್ ಸಮ್ಮತಿ ಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಹೈಕಮಾಂಡ್‌ ಒಪ್ಪಿಗೆ ನೀಡುತ್ತಾ? ಎಂಬುದು ಕುತೂಹಲ ಕೆರಳಿಸಿದೆ. ಹಲವು ಆಕಾಂಕ್ಷಿಗಳು ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಈಗಾಗಲೇ ಆಕಾಂಕ್ಷಿಗಳ ತಂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದೆ. ಈಗಾಗಲೇ ಅನ್ಯ ಪಕ್ಷಗಳ ನಾಯಕರಿಗೆ ಗಾಳ ಹಾಕಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಕಾದು ನೋಡುವ ತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದ್ದರೂ ಕೂಡ, ಅಳೆದು ತೂಗಿ ಇಂದು ಮೂರನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.

Congress third list: The third list of Congress candidates is likely to be released today

Comments are closed.