ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಬಿಜೆಪಿ, 3 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

ಮಂಗಳೂರು : ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada congress) ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ವೇದವ್ಯಾಸ್‌ ಕಾಮತ್, ಬೆಳ್ತಂಗಡಿ‌ ಹರೀಶ್‌ ಪೂಂಜಾ, ಮೂಡಬಿದಿರೆಯಲ್ಲಿ ಉಮಾನಾಥ ಕೋಟ್ಯಾನ್, ಸುಳ್ಯ‌ ಭಾಗೀರತಿ, ಬಂಟ್ವಾಳ ಕ್ಷೇತ್ರದಲ್ಲಿ ರಾಜೇಶ್‌ ನಾಯಕ್‌ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಉಳಿದಂತೆ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ.ಖಾದರ್‌, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನಾಯತ್‌ ಆಲಿ ಹಾಗೂ ಪುತ್ತೂರು ಕ್ಷೇತ್ರದಲ್ಲಿ ಅಶೋಕ್‌ ಕುಮಾರ್‌ ರೈ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಉಳ್ಳಾಲ ಕ್ಷೇತ್ರವನ್ನು ಹೊರತು ಪಡಿಸಿ ಉಳಿದ ಏಳು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳಿದ್ದರು. ಈ ಪೈಕಿ ಪುತ್ತೂರಿನ ಸಂಜೀವ ಮಠಂದೂರು ಹಾಗೂ ಸುಳ್ಯದ ಶಾಸಕ ಅಂಗಾರ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿ ಹೊಸ ಅಭ್ಯರ್ಥಿಗಳಿಗೆ ಮಣೆ ಹಾಕಲಾಗಿತ್ತು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್‌ ನೀಡಿದ ಹಿನ್ನೆಲೆಯಲ್ಲಿ ಅರುಣ್‌ ಪುತ್ತಿಲ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು. ಇದರಿಂದಾಗಿ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ : ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಿನ್ನಡೆ, ವಿಜಯೇಂದ್ರಗೆ ಮುನ್ನಡೆ

ಇದನ್ನೂ ಓದಿ : Karnataka Election Result 2023 : ಕಾಂಗ್ರೆಸ್‌ 103, ಬಿಜೆಪಿ 80, ಜೆಡಿಎಸ್‌ 34 ಮುನ್ನಡೆ

ಇದನ್ನೂ ಓದಿ : ಕರ್ನಾಟಕ ಚುನಾವಣೆ ಮತ ಎಣಿಕೆ ಆರಂಭ : ಬಿಜೆಪಿ, ಕಾಂಗ್ರೆಸ್‌ ಸಮಬಲದ ಪೈಪೋಟಿ

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಚುನಾವಣೆ : ಹೇಗೆ ನಡೆಯುತ್ತೆ ಮತ ಎಣಿಕೆ ?

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ 2023 : ನಾಳೆ ಮತ ಎಣಿಕೆಗೆ ಸಕಲ ಸಿದ್ದತೆ

Dakshina Kannada congress In Dakshina Kannada district, BJP is leading in 5 constituencies, Congress is leading in 3 constituencies

Comments are closed.