ತಂದೆ ತಾಯಿಯನ್ನು ಕಳೆದುಕೊಂಡ ನೋವಿನಲ್ಲೇ ಚುನಾವಣಾ ಪ್ರಚಾರಕ್ಕಿಳಿದ ದರ್ಶನ್‌ ಧ್ರುವನಾರಾಯಣ್‌

ಮೈಸೂರು : (Darshan Dhruvanarayan) ಕಳೆದ ಕೆಲವು ವಾರಗಳ ಹಿಂದಷ್ಟೇ ಕಾಂಗ್ರೆಸ್‌ ಅಭ್ಯರ್ಥಿ ಧ್ರುವನಾರಾಯಣ ಅವರು ಇಹಲೋಕ ತ್ಯಜಿಸಿದ್ದರು. ಇದಾದ ಬಳಿಕ ಕಾಂಗ್ರೆಸ್‌ ಧ್ರುವನಾರಾಯಣ ಅವರ ಮಗ ದರ್ಶನ್‌ ಧ್ರುವನಾರಾಯಣ ಅವರಿಗೆ ಸಂಜನಗೂರು ಕ್ಷೇತ್ರದಲ್ಲಿ ಟಿಕೆಟ್‌ ನೀಡಿತ್ತು. ಇನ್ನೇನು ಚುನಾವಣೆ ಸಮೀಪಿಸುತ್ತಿದೆ. ಚುನಾವಣಾ ಪ್ರಚಾರಗಳು ಭರದಿಂದಲೇ ಸಾಗುತ್ತಿದೆ. ಹೀಗಿರುವಾಗ ದರ್ಶನ್‌ ಧ್ರುವನಾರಾಯಣ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಕೆಲವು ವಾರಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡ ದರ್ಶನ್‌ ಇದೀಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡ ನೋವಿನಲ್ಲೇ ಚುನಾವಣಾ ಪ್ರಚಾರ ಕಣಕ್ಕಿಳಿದಿದ್ದಾರೆ.

ಧ್ರುವನಾರಾಯಣ ಅವರ ಪತ್ನಿ ವೀಣಾ ಇಂದು ನಿಧನರಾಗಿದ್ದಾರೆ. ಬ್ರೈನ್‌ ಟ್ಯೂಮರ್‌ ನಿಂದ ಬಳಲುತ್ತಿದ್ದ ಅವರು ಕಳೆದ ಹತ್ತು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇದಲ್ಲದೇ ಪತಿಯ ಅಕಾಲಿಕ ಸಾವಿನಿಂದಾಗಿ ಇವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ತೀವ್ರ ಅನಾರೋಗ್ಯ ಉಂಟಾದ ಕಾರಣದಿಂದಾಗಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇದೀಗ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡ ಧ್ರುವನಾರಾಯಣ ಅನಾಥರಾಗಿದ್ದು, ಇದರ ನೋವಿನ ಜೊತೆಗೆ ಚುನಾವಣಾ ಪ್ರಚಾರ ಕಣಕ್ಕಿಳಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ಈ ಬಾರಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದರು. ಇನ್ನು ಡಾ. ಹೆಚ್​.ಸಿ ಮಹಾದೇವಪ್ಪ ಸಹ ಇದೇ ನಂಜನಗೂಡ ಕ್ಷೇತ್ರದ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಟಿಕೆಟ್​ಗಾಗಿ ಈ ಇಬ್ಬರು ನಾಯಕರು ಭಾರಿ ಕಸರತ್ತು ನಡೆಸಿದ್ದರು. ಮಹಾದೇವಪ್ಪ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದರೆ, ಧ್ರುವನಾರಾಐನ ಡಿಕೆ ಶಿವಕುಮಾರ್​ ಬಣದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ದುರದೃಷ್ಟವಶಾತ್ ಅವರು ಮಾರ್ಚ್​ 11 ರಂದು ಅಕಾಲಿಕ ನಿಧನ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ನಂಜನಗೂಡು ಕಾಂಗ್ರೆಸ್​ ಟಿಕೆಟ್ ಮಹಾದೇವಪ್ಪ ಅವರಿಗೆ ಖಚಿತ ಎನ್ನಲಾಗಿತ್ತು.

ಆದ್ರೆ, ಧ್ರುವನಾರಾಯಣ ಅವರ ಅಭಿಮಾನಿಗಳು ​ಪುತ್ರ ದರ್ಶನ್​ ಅವರಿಗೆ ಟಿಕೆಟ್​ ನಿಡಬೇಕೆಂದು ಪಟ್ಟು ಹಿಡಿದಿದ್ದರು. ಈ ಬಗ್ಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಟಿಕೆಟ್​ ಆಕಾಂಕ್ಷಿಯಾಗಿದ್ದ ಮಹಾದೇವಪ್ಪ ಅವರ ಬಳಿ ಮನವಿ ಮಾಡಿದ್ದರು. ಅಂತಿಮವಾಗಿ ಮಾನವೀಯತೆ ಆಧಾರದ ಮೇಲೆ ಮಹಾದೇವಪ್ಪ ಅವರು ಟಿಕೆಟ್​ ರೇಸ್​ನಿಂದ ಹಿಂದೆ ಸರಿದು ದರ್ಶನ್ ಧ್ರುವನಾರಾಯಣ ಅವರಿಗೆ ಟಿಕೆಟ್​ ನೀಡಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಕಾಂಗ್ರೆಸ್​ ದರ್ಶನ್ ಧ್ರುವನಾರಾಯಣ ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ.

ಇದನ್ನೂ ಓದಿ : BJP Candidates List : ಬಿಜೆಪಿಯಲ್ಲಿ ಅಂತಿಮ ಹಂತಕ್ಕೆ ಟಿಕೇಟ್ ಸರ್ಕಸ್: ದೆಹಲಿ ತಲುಪಿದ ಪಟ್ಟಿ ಹಾಗೂ ಅಭ್ಯರ್ಥಿಗಳು

ಕಾಂಗ್ರೆಸ್‌ ಅಭ್ಯರ್ಥಿಗೆ ಜೆಡಿಎಸ್‌ ಬೆಂಬಲ ;

ಇದೀಗ ತಂದೆ ತಾಯಿಯನ್ನು ಕಳೆದುಕೊಂಡ ಧ್ರುವನಾರಾಯಣ ವಿರುದ್ದ ಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವರಿಗೆ ಬೆಂಬಲ ನೀಡಲು ಮುಂದಾಗಿದೆ. ತಂದೆ ಕಳೆದುಕೊಂಡ ಬೆನ್ನಲ್ಲೇ ತಾಯಿಯನ್ನು ಕಳೆದುಕೊಂಡಿದ್ದಾರೆ. ಇಂತಹ ದುಃಖದಲ್ಲಿರುವ ಅವರ ಎದುರು ಸ್ಪರ್ಧಿಸಲು ನಮಗೆ ಮನಸ್ಸು ಒಪ್ಪುತ್ತಿಲ್ಲ ಎಂದು ಜಿ.ಟಿ. ದೇವೇಗೌಡ ಅವರು ತಿಳಿಸಿದ್ದಾರೆ.

Darshan Dhruvanarayan: Darshan Dhruvanarayan started campaigning in the pain of losing his parents.

Comments are closed.