ಕರ್ನಾಟಕ ಚುನಾವಣಾ ಫಲಿತಾಂಶ 2023 : ಜೆಡಿಎಸ್ ನಾಯಕರಿಗೆ ಡಿಕೆ ಶಿವಕುಮಾರ್ ಬಹಿರಂಗ ಆಹ್ವಾನ

ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಮುಕ್ತಾಯಕಂಡಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ಈ ಹಿನ್ನೆಲೆಯಲ್ಲಿ ನಮ್ಮೊಂದಿಗೆ ಬನ್ನಿ ಎಂದು ಜೆಡಿಎಸ್‌ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Sivakumar – HD Kumaraswamy) ಅವರು ಬಹಿರಂಗ ಆಹ್ವಾನ ನೀಡಿದ್ದಾರೆ.

ಇಂದು ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್‌ಗಳಲ್ಲಿ ನನಗೆ ನಂಬಿಕೆ ಇಲ್ಲ. ನನ್ನ ಸಂಖ್ಯೆ 141ನೊಂದಿಗೆ ಕಾಂಗ್ರೆಸ್ ಪರವಾಗಿ ದೊಡ್ಡ ಬಿರುಗಾಳಿ ಬೀಸುತ್ತಿದೆ. ಯಾವುದೇ ಕಾರಣಕ್ಕೂ ಸಂಖ್ಯೆ ಕಡಿಮೆಯಾಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಲಿದೆ ಎಂದು ಹೇಳಿದ್ದಾರೆ. ಬುಲೆಟ್‌ಗಿಂತ ಬ್ಯಾಲೆ ಬಲವಾಗಿರುತ್ತದೆ. ಈ ದೇಶಕ್ಕೆ ಸ್ವಾತಂತ್ರ್ಯ ನೀಡುವಾಗ ಜನರು ಹೇಗೆ ಗುಂಡುಗಳಿಗೆ ಹೆದರುತ್ತಿರಲಿಲ್ಲವೋ ಅಂತಹ ಆಶಯಗಳಿಗೆ ಈ ಬಾರಿ ಜನ ಮನ್ನಣೆ ನೀಡಿಲ್ಲ. ನಾಳೆ ಮಧ್ಯಾಹ್ನ 1 ಗಂಟೆಗೆ ಎಲ್ಲ ತೀರ್ಪು ಹೊರಬೀಳಲಿದೆ ಎಂದರು.

ಪಕ್ಷಕ್ಕಾಗಿ ಶ್ರಮಿಸಿದ್ದೇನೆ. ಜವಾಬ್ದಾರಿ ಕೊಟ್ಟ ದಿನದಿಂದಲೂ ಸರಿಯಾಗಿ ನಿದ್ದೆ ಮಾಡಿಲ್ಲ. ಮಲಗಲೂ ಬಿಡುವುದಿಲ್ಲ. ದಿನೇಶ್ ಗುಂಡೂರಾವ್ ಅವರು ಹೋದಾಗ ನನಗೆ ಜವಾಬ್ದಾರಿ ನೀಡಿದರು. ಅವರೆಲ್ಲರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆಗ ಸೋನಿಯಾ ಗಾಂಧಿ ನನಗೆ ಜವಾಬ್ದಾರಿ ನೀಡಿದರು. ಈಗ ಎಲ್ಲರೂ ನಮ್ಮೊಂದಿಗೆ ಸಹಕರಿಸುತ್ತಿದ್ದಾರೆ. ಹಿರಿಯರು, ಕಿರಿಯರು ಎಲ್ಲರೂ ಸಹಕರಿಸುತ್ತಾರೆ. ಒಳ್ಳೆ ಸರಕಾರ ನೀಡುತ್ತೇವೆ ಎಂದರು.

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ 2023 : ನಾಳೆ ಮತ ಎಣಿಕೆಗೆ ಸಕಲ ಸಿದ್ದತೆ

ಕುಮಾರಸ್ವಾಮಿ ಏನು ಹೇಳುತ್ತಾರೋ ಗೊತ್ತಿಲ್ಲ. ಮೈತ್ರಿ ಬಗ್ಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಕುಮಾರಣ್ಣ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ಪ್ರಯತ್ನಿಸಿದರು. ಹಾಗಾಗಿ ಅವರು ಹಾಗೆ ಮಾತನಾಡುತ್ತಾರೆ. ನಾನೂ ಒಬ್ಬ ಹೋರಾಟಗಾರ. ನಾನು ರಾಜಕೀಯದಿಂದ ನಿವೃತ್ತಿಯಾಗುವವನಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ಹೋರಾಡುತ್ತೇನೆ. ಜೆಡಿಎಸ್ ಮುಖಂಡರಿಗೆ ಬಹಿರಂಗವಾಗಿ ಕಾರ್ಯಕರ್ತರನ್ನು ನನ್ನೊಂದಿಗೆ ಬನ್ನಿ ಎಂದು ಆಹ್ವಾನಿಸಿದರು. ಡಿಕೆಶಿ ಅವರ ಬಹಿರಂಗ ಆಹ್ವಾನ ನೋಡುತ್ತಿದ್ದರೆ, ಮೈತ್ರಿಗೆ ಆಹ್ವಾನ ಕೊಟ್ಟಂತೆ ಕಾಣುತ್ತಿದೆ. ಅದು ಏನಾದರೂ ಆಗಲಿ ನಾಳೆ ಮತ ಏಣಿಕೆಯ ನಂತರ ಇದಕ್ಕೆಲ್ಲಾ ತೆರೆ ಬೀಳಲಿದೆ.

DK Sivakumar – HD Kumaraswamy : Karnataka Election Result 2023 : DK Sivakumar Open Invitation to JDS Leaders

Comments are closed.