ಯಾರಾಗ್ತಾರೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಸರಕಾರ ರಚನೆಗೆ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ಸರಕಾರ ರಚನೆಗೆ ರಾಜ್ಯಪಾಲರನ್ನು (DK Sivakumar – Siddaramaiah) ಭೇಟಿಯಾಗಲಿದ್ದಾರೆ. ಇನ್ನು ಕಾಂಗ್ರೆಸ್‌ ಪಕ್ಷದಿಂದ ಯಾರು ಮುಖ್ಯಮಂತ್ರಿ ಆಗ್ತಾರೆ ಅನ್ನೋ ಕುತೂಹಲ ವ್ಯಕ್ತವಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಪರಮೇಶ್ವರ್‌ ಹೆಸರು ಬಲವಾಗಿ ಕೇಳಿಬರುತ್ತಿದೆ.

ಮುಖ್ಯಮಂತ್ರಿ ಆಗ್ತಾರಾ ಸಿದ್ದರಾಮಯ್ಯ ?

ಕಳೆದ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲ ರಾಜ್ಯಭಾರವನ್ನು ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದ್ದರು. ಬಿಜೆಪಿ ಶತಾಯಗತಾಯ ಸಿದ್ದರಾಮಯ್ಯ ಅವರನ್ನು ಸೋಲಿಸುವ ಸಲುವಾಗಿ ವಿ.ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿತ್ತು. ಆದರೂ ಸಿದ್ದರಾಮಯ್ಯ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕುರುಬ ಸಮುದಾಯದ ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷದಿಂದ ಸಿಎಂ ಹುದ್ದೆಯಲ್ಲಿ ಪ್ರಮುಖ ಸ್ಥಾನಕ್ಕೇರಿದ್ದಾರೆ. 75ರ ಹರೆಯದ ಸಿದ್ದರಾಮಯ್ಯ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಿಎಂ ಕನಸು ನನಸಾಗುತ್ತಾ ?

ಪ್ರಬಲ ಒಕ್ಕಲಿಗ ನಾಯಕನಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಿಎಂ ರೇಸ್‌ನಲ್ಲಿದ್ದಾರೆ. ಕಂದಾಯ ಸಚಿವ ಆರ್.‌ ಅಶೋಕ್‌ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸುವ ಮೂಲಕ ಕನಕಪುರ ಕಾಂಗ್ರೆಸ್‌ ಪಕ್ಷದ ಭದ್ರಕೋಟೆ ಅನ್ನೋದನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ಕನಕಪುರ ಬಂಡೆ ಎಂದೇ ಖ್ಯಾತಿ ಪಡೆದಿರುವ ಶಿವಕುಮಾರ್‌ ಸಿಎಂ ಹುದ್ದೆಯ ಮೇಲೆ ಕನಸಿಟ್ಟಿದ್ದಾರೆ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತ. ಇದೇ ಕಾರಣಕ್ಕೆ ಡಿಕೆಶಿ ಈ ಬಾರಿ ಸಿಎಂ ಆಗುವ ಸಾಧ್ಯತೆಯಿದೆ. 1980ರ ದಶಕದಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಡಿಕೆಶಿ ಕಾಂಗ್ರೆಸ್‌ ಕಾರ್ಯಕರ್ತನಿಂದ ಸಚಿವ ಸ್ಥಾನದವರೆಗೂ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಕಾಂಗ್ರೆಸ್‌ ಪಕ್ಷ ಸಂಕಷ್ಟಕ್ಕೆ ಸಿಲುಕಿದ ವೇಳೆಯಲ್ಲಿ ಟ್ರಬಲ್‌ ಶೂಟರ್‌ ಆಗಿ ಕೆಲಸ ಮಾಡಿದವರು. ಹೊರ ರಾಜ್ಯಗಳಲ್ಲಿ ರಾಜಕೀಯ ಬಿಕ್ಕಟ್ಟು ಎದುರಾದಾಗಲೂ ಕೂಡ ಕಾಂಗ್ರೆಸ್‌ ಹೈಕಮಾಂಡ್‌ ಮನಮೆಚ್ಚುವ ಕಾರ್ಯವನ್ನು ಮಾಡಿದ್ದಾರೆ. ರೆಸಾರ್ಟ್‌ ರಾಜಕಾರಣ, ಪಕ್ಷಾಂತರ ಪರ್ವ ಎದುರಾದಾಗಲೂ ಕೂಡ ಡಿಕೆಶಿ ಪಕ್ಷವನ್ನು ಸಮರ್ಥವಾಗಿ ಮುನ್ನೆಡೆಸಿದ್ದಾರೆ.

ಇದನ್ನೂ ಓದಿ : Karnataka Election Result 2023 : ಉಡುಪಿ ಜಿಲ್ಲೆಯಲ್ಲಿ ಖಾತೆ ತೆರೆಯದ ಕಾಂಗ್ರೆಸ್, ಐದು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ

ಇನ್ನೊಂದೆಡೆಯಲ್ಲಿ ರಾಜ್ಯದಲ್ಲೀಗ ದಲಿತ ಸಿಎಂ ಕೂಗು ಕೇಳಿಬರುತ್ತಿದೆ. ಒಂದೆಡೆಯಲ್ಲಿ ಡಾ.ಜಿ.ಪರಮೇಶ್ವರ್‌ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಇನ್ನೊಂದೆಡೆಯಲ್ಲಿ ಪ್ರಿಯಾಂಕ ಖರ್ಗೆ ಹೆಸರನ್ನು ಅಭಿಮಾನಿಗಳು ತೇಲಿಬಿಟ್ಟಿದ್ದಾರೆ. ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಸಿಎಂ ಸ್ಥಾನವನ್ನು ಅಲಂಕರಿಸಿದ್ರೂ ಅಚ್ಚರಿಯಿಲ್ಲ.

DK Sivakumar – Siddaramaiah: Who will be the next Chief Minister of Karnataka?

Comments are closed.