ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಿನ್ನಡೆ, ವಿಜಯೇಂದ್ರಗೆ ಮುನ್ನಡೆ

ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (HD Kumaraswamy – Vijayendra ) ಅವರಿಗೆ ಹಿನ್ನಡೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ಸಿಪಿ ಯೋಗೀಶ್ವರ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ. ಯೋಗೀಶ್ವರ್‌ ಅವರು ಆರಂಭಿಕ ಹಂತದಿಂದಲೂ ಸತತವಾಗಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಶ್ರೀರಾಮುಲು, ಗೋವಿಂದ ಕಾರಜೋಳ, ರಮೇಶ್‌ ಜಾರಕಿಹೊಳಿ, ಸಿ.ಟಿ.ರವಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಇನ್ನು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್‌ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಗಂಗಾವತಿಯಿಂದ ಸ್ಪರ್ಧೆ ಮಾಡಿದ್ದ ಜನಾರ್ಧನ ರೆಡ್ಡಿ ಅವರು ಕೂಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಜ್ಯದ 224 ವಿಧಾನಸಭಾ ಚುನಾವಣೆಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು 2615ಮಂದಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಈ ಪೈಕಿ 2430 ಪುರುಷರು, 184 ಮಹಿಳೆಯರು ಹಾಗೂ ಇಬ್ಬರು ತೃತೀಯ ಲಿಂಗಿ ಅಭ್ಯರ್ಥಿ ಸ್ಪರ್ಧೆ ಮಾಡಿದ್ದರು. ಬಳ್ಳಾರಿ ನಗರ ಕ್ಷೇತ್ರದಲ್ಲಿ 24 , ಹೊಸಕೊಟೆ ಕ್ಷೇತ್ರದಲ್ಲಿ 23 ಚಿತ್ರದುರ್ಗದಲ್ಲಿ 21, ಯಲಹಂಕದಲ್ಲಿ 20 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು.

ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಕಾರ್ಯ ಈಗಾಗಲೇ ಮುಕ್ತಾಯವಾಗಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಮೊದಲ ಸುತ್ತಿನ ಮತ ಎಣಿಕೆ ಕಾರ್ಯವೂ ಪೂರ್ಣಗೊಂಡಿದೆ. ಬಹುತೇಕ ಹಾಲಿ ಶಾಸಕರಿಗೆ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದ್ದು, ಸಂಜೆಯ ಹೊತ್ತಿಗೆ ರಾಜ್ಯ ಸರಕಾರದ ಸಂಪೂರ್ಣ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆ ನಡೆಯುವ ಕೇಂದ್ರದ 100 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಸೋಲು ಗೆಲುವಿನ ಲೆಕ್ಕಾಚಾರವನ್ನು ಶುರು ಮಾಡಿವೆ. ಹಲವು ಸಮೀಕ್ಷೆಗಳು ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಒಲವು ವ್ಯಕ್ತಪಡಿಸಿವೆ. ಜೊತೆಗೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಅನ್ನೋದನ್ನು ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿಯೇ ನಡೆಯುತ್ತಿವೆ.

ಇದನ್ನೂ ಓದಿ : ಉಡುಪಿಯಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ

ರಾಜ್ಯದಲ್ಲಿ ಒಟ್ಟು36 ಕಡೆಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. 306 ಹಾಲ್ ಹಾಗೂ 4,256 ಟೇಬಲ್​ ಗಳನ್ನು ಅಳವಡಿಕೆ ಮಾಡಲಾಗಿದೆ. ಮತ ಎಣಿಕೆಯ ಕಂದ್ರಗಳಲ್ಲಿ 224 ಆರ್‌ ಓ, 317 ಎಆರ್‌ಓ, 4,256 ಸೂಪರ್ ವೈಸರ್ಸ್, 5,256 ಕೌಂಟಿಂಗ್ ಅಸಿಸ್ಟೆಂಟ್ಸ್, 4,256 ಸೂಕ್ಷ್ಮ ವೀಕ್ಷಕರು, 450 ಹೆಚ್ಚುವರಿ ಎಆರ್‌ಓಗಳನ್ನು ನಿಯೋಜನೆ ಮಾಡಲಾಗಿದೆ.

Former CM HD Kumaraswamy lost, Vijayendra lead

Comments are closed.