HDK to Dharamsthala : ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭೇಟಿ

ಬೆಳ್ತಂಗಡಿ : (HDK to Dharamsthala) ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿರುವ ಅಭ್ಯರ್ಥಿಗಳು ಟೆಂಪಲ್‌ ರನ್‌ ಆರಂಭಿಸಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಮಂಜುನಾಥನ ದರ್ಶನ ಪಡೆದಿದ್ದಾರೆ.

ಚುನಾವಣೆಗೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರವಾದ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದಿದ್ದಾರೆ. ಧರ್ಮದೇವರ ದರ್ಶನ ಪಡೆದ ಬಳಿಕ ಪೂಜ್ಯ ಶ್ರೀ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದವನ್ನು ಪಡೆದಿದ್ದಾರೆ. ಇನ್ನೂ ಕುಮಾರಸ್ವಾಮಿ ಜೊತೆಗೆ ವಿಧಾನಪರಿಷತ್‌ ಸದಸ್ಯರಾದ ಭೋಜೇಗೌಡರು ಕೂಡ ಉಪಸ್ಥಿತರಿದ್ದರು.

ವೀರೇಂದ್ರ ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ದೇವರ ದರ್ಶನ ಪಡೆದು ಹೊರಬರುವ ವೇಳೆ ನೆರೆದ ಭಕ್ತರಲ್ಲಿ ಅವರ ಬೆಂಬಲಿಗರು ಜೈಕಾರ ಹಾಕಿ ಹಸ್ತಲಾಘವ ಮಾಡಿದರು. ಇನ್ನು ಹಾಸನ ಜೆಡಿಎಸ್ ಟಿಕೆಟ್ ಗೊಂದಲ ಪರಿಹಾರಕ್ಕೆ ಐದು ದಿನಗಳ ಕಾಲ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಹೋಮ-ಹವನ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಸಂಜೆ ಅವರು ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ದುರ್ಗಾ ಪೂಜೆ ಸಲ್ಲಿಸಿದರು. ಐದು ದಿನಗಳ ಕಾಲ ಧಾರ್ಮಿಕ ಹೋಮ ಹವನ ನಡೆದಿದ್ದು, ಶನಿವಾರ ಅದರ ಪೂರ್ಣಾಹುತಿಯಲ್ಲಿ ಖುದ್ದು ಎಚ್‌ಡಿಕೆ ಅವರೇ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಮುಂದಿನ ದಿನಗಳಲ್ಲಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ನಾಳ ದುರ್ಗಾಪರಮೇಶ್ವರೀ ತಾಯಿಯ ಆಶೀರ್ವಾದದಿಂದ ‌ರಾಜ್ಯದಲ್ಲಿ ಸುಸ್ಥಿರ ಆಡಳಿತ ಬರುವಂತೆ ಹಾಗೂ ದೇವರ ಅನುಗ್ರಹದಿಂದ‌ ನಾಡಿನ‌ ಜನತೆಗೆ ಒಳಿತಾಗಲಿ ಎಂದು ವಿಶೇಷ ಹೋಮ ಹವನ ಮಾಡಿದ್ದೇನೆ. ಪಕ್ಷದ ಮತ್ತು ಎಲ್ಲ ವಿಚಾರಗಳ ಬಗ್ಗೆಯೂ ಸಂಕಲ್ಪ ಮಾಡಿದ್ದೇನೆ ಎಂದು ಎಚ್.ಡಿ‌ ಕುಮಾರಸ್ವಾಮಿ ಮಾಧ್ಯಮದೊಂದಿಗೆ ಪ್ರತಿಕ್ರಿಯೆ ನೀಡಿದರು

ಇದನ್ನೂ ಓದಿ : ಜಗದೀಶ್‌ ಶೆಟ್ಟರ್‌ ರಾಜೀನಾಮೆ, ಬಿಜೆಪಿ ವರಿಷ್ಠರ ಸಭೆ ಅಂತ್ಯ

ಇದನ್ನೂ ಓದಿ : Karnataka Weather Report : ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

HDK to Dharamsthala: Former Chief Minister HD Kumaraswamy visited Dharamsthala

Comments are closed.