ನನಗೆ ಬಿಜೆಪಿ ಟಿಕೆಟ್‌ ಕೈ ತಪ್ಪಲು ಬಿ.ಎಲ್‌ ಸಂತೋಷ್‌ ಕಾರಣ : ಜಗದೀಶ್‌ ಶೆಟ್ಟರ್‌ ಆರೋಪ

ಬೆಂಗಳೂರು : (Jagdish Shettar vs BL Santosh) ರಾಜ್ಯದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಟಿಕೆಟ್‌ ಕಾದಾಟ ಜೋರಾಗಿಯೇ ನಡೆಯುತ್ತಿದೆ. ಟಿಕೆಟ್‌ ಕೈ ತಪ್ಪಿದ ಹಿನ್ನಲೆಯಲ್ಲಿ ಬಂಡಾಯವೆದ್ದಿರುವ ಹಾಲಿ ಶಾಸಕರಾದ ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ ಸೇರ್ಪಡೆಗೊಂಡ ಬೆನ್ನಲ್ಲೇ ಇಂದು ತುರ್ತು ಮಾಧ್ಯಮ ಸುದ್ದಿಗೋಷ್ಠಿ ನಡೆಸಿದ್ದು, ಇಲ್ಲಿ ತನಗೆ ಟಿಕೆಟ್‌ ಕೈ ತಪ್ಪಲು ಕಾರಣರಾದವರ ಬಗ್ಗೆ ಆರೋಪಿಸಿದ್ದಾರೆ. ನನಗೆ ಟಿಕೆಟ್‌ ಕೈ ತಪ್ಪಲು ಬಿ.ಎಲ್‌. ಸಂತೋಷ್‌ ಕಾರಣ ಎಂದು ಆರೋಪಿಸಿದ್ದಾರೆ.

ಬಂಡಾಯವೆದ್ದಿರುವ ಹಾಲಿ ಶಾಸಕರು ಇದೀಗ ಪಕ್ಷಗಳನ್ನು ತೊರೆದು ಬೇರೆ ಪಕ್ಷಗಳಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅಂತೆಯೇ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕೂಡ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌ ಸೇರ್ಪಡೆ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದ್ದು, ಪಕ್ಷ ತೊರೆಯಲು ಹಾಗೂ ಟಿಕೆಟ್‌ ಕೈ ತಪ್ಪಲು ಕಾರಣರಾದವರ ಬಗ್ಗೆ ಶೆಟ್ಟರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯಲ್ಲಿ ಹಲವು ದಿನಗಳಿಂದ ವೇದನೆ ಅನುಭವಿಸಿದ್ದೇನೆ. ಹಲವು ನಾಯಕರ ಬಗ್ಗೆ ಮಾತನಾಡಬೇಕಿದೆ. ಮಾತನಾಡದಿದ್ರೆ ಮುಂದೆ ಸಮಸ್ಯೆ ಎದುರಾಗಲಿದೆ. ನಾನು ಸಿಎಂ ಆಗಿದ್ದಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನನಗೆ ಬಿಜೆಪಿ ಟಿಕೆಟ್ ತಪ್ಪಿಸಿದವರ ಕಾರಣರಾದವರ ಹೆಸರು ಹೇಳುವ ಸಮಯ ಬಂದಿದೆ. ಅಧಿಕಾರದ ಲಾಲಸೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ನನಗೆ ಟಿಕೆಟ್ ತಪ್ಪುವಲ್ಲಿ ಕೆಲ ನಾಯಕರು ಕಾರಣ. ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದೇನೆ. ದಿನಗೂಲಿ ನೌಕರರನ್ನು ಖಾಯಂ ಮಾಡಿದ್ದೇನೆ ಎಂದು ಬಿಜೆಪಿ ನಾಯಕರ ವಿರುದ್ದ ಕಿಡಿ ಕಾರಿದ್ದಾರೆ.

ಶೆಟ್ಟರ್ ಲಿಂಗಾಯತ ಅಲ್ಲಾ ಅಂತ ಕೆಲವರು ಹೇಳ್ತಾರೆ. ನಿನ್ನೆ ಮಾತನಾಡಿದವರು ಕ್ಷೇತ್ರ ಬಿಟ್ಟು ಹೊರಗೆ ಹೋಗಲ್ಲ. ಸ್ಕ್ರಿನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು. ನನಗೆ ಟಿಕೆಟ್ ಕೈತಪ್ಪಲು ಕೆಲ ನಾಯಕರು ಷಡ್ಯಂತ್ರ ಮಾಡಿದ್ದಾರೆ. ನನಗೆ ಟಿಕೆಟ್ ಕೈತಪ್ಪಲು ಬಿ.ಎಲ್. ಸಂತೋಷ್ ಕಾರಣ. ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡಿದ್ದೇನೆ. ಯಡಿಯೂರಪ್ಪ, ಅನಂತ್ ಕುಮಾರ್ ಜೊತೆಗೆ ಪಕ್ಷ ಕಟ್ಟಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ : Jagdish Shettar join Congress : ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಕಳೆದ ಬಾರಿಯೂ ಮಹೇಶ್‌ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಈ ಬಾರಿ ಮಹೇಶ್ ತೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಮೇಲೆ ಪಕ್ಷಕ್ಕೆ ಅಷ್ಟು ಗೌರವವಿದ್ದರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಬಹುದಿತ್ತು ಅಥವಾ ಕೇಂದ್ರಕ್ಕೆ ತೆಗೆದುಕೊಳ್ಳಬಹುದಾಗಿತ್ತು. ಆದರೆ, ಬಿ.ಎಲ್ ಸಂತೋಷ್ ಅವರಿಗೆ ನನ್ನ ಮೇಲೆ ಕಣ್ಣಿತ್ತು. ನನ್ನನ್ನು ಪದೇ ಪದೇ ಅವಮಾನಿಸಿದರು. ಅಪಪ್ರಚಾರ ನಡೆಸಿದರು. ಕಡೆಗೆ ಟಿಕೆಟ್ ಕೊಡದೇ ಸತಾಯಿಸಿದರು ಎಂದು ಸಂತೋಷ್‌ ವಿರುದ್ದ ಶೆಟ್ಟರ್‌ ಗಂಭೀರವಾಗಿ ಆರೋಪಿಸಿದ್ದಾರೆ.

Jagdish Shettar vs BL Santosh: BL Santosh is the reason I lost BJP ticket: Jagdish Shettar alleges

Comments are closed.