JDS Guarantee : ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ ಅನುದಾನ

ಕೋಲಾರ : (JDS Guarantee) ರಾಜ್ಯದಲ್ಲಿ ಚುನಾವಣ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ ಸದ್ಯ ಚುನಾವಣೆ ಕಾವು ನಡುವೆ ಮೀಸಲಾತಿ ಚರ್ಚೆ, ಗೊಂದಲಗಳು ಹುಟ್ಟುಕೊಂಡಿವೆ. ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಈ ಮಧ್ಯೆ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲು ತಂತ್ರಗಳನ್ನು ಹೂಡುತ್ತಿದ್ದಾರೆ. ಕಾಂಗ್ರೆಸ್‌ ತಾನು ಅಧಿಕಾರಕ್ಕೆ ಬಂದರೆ ಕೆಎಂಎಫ್‌ ಅಭಿವೃದ್ದಿಗೆ ಆದ್ಯತೆ ನೀಡುತ್ತೇವೆ ಎಂದು ಹೇಳುವ ಮೂಲಕ ಅಮುಲ್‌ ವಿವಾದವನ್ನು ಚುನಾವಣೆ ಗೆಲ್ಲಲು ಅಸ್ತ್ರವನ್ನಾಗಿಸಿಕೊಂಡಿದೆ. ಇನ್ನೊಂದೆಡೆ ಜೆಡಿಎಸ್‌ ರೈತ ಮಕ್ಕಳನ್ನು ಮುಂದಿಟ್ಟುಕೊಂಡು ಚುನಾವಣೆ ಗೆಲ್ಲಲು ಹುನ್ನಾರ ನಡೆಸುತ್ತಿದೆ. ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ ಎರಡು ಲಕ್ಷ ರೂ ಅನುಧಾನ ಘೋಷಣೆ ಮಾಡುವ ಮೂಲಕ ಚುನಾವಣೆ ಗೆಲ್ಲಲು ಸಂಚು ರೂಪಿಸಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ ಎಂಬ ಮಾತೇ ಇದೀಗ ಜೆಡಿಎಸ್‌ ಗೆ ಅಸ್ತ್ರವಾಗಿದೆ. ಮುಳಬಾಗಿಲಿನಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು ಈ ಘೋಷಣೆಯನ್ನು ಮಾಡಿದ್ದು, ಇದರ ಜೊತೆಗೆ ಜೆಡಿಎಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇನ್ನೂ ಇದರ ಜೊತೆಗೆ ನಮ್ಮ ಸರಕಾರ ಬಂದರೆ ಮೂರನೇ ಹಂತದ ಶುದ್ದೀಕರಣ ಮಾಡಿ ಶುದ್ದ ಕುಡಿಯುವ ನೀರು ಕೊಡುತ್ತೇವೆ ಎಂದಿದ್ದು, ಕೆಸಿ ವ್ಯಾಲಿ ಯೋಜನೆ ಹೆಸರಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಜೇಬು ತುಂಬಿಸಿಕೊಂಡಿದ್ದಾರೆ. ಅದೇ ಹಣದಲ್ಲಿ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಇದರ ಜೊತೆಗೆ ಮೀಸಲಾತಿ ಗೊಂದಲವನ್ನು ಸರಿಪಡಿಸಿಕೊಡುವುದಾಗಿ ಹೇಳಿದರು.

ಇದನ್ನೂ ಓದಿ : ಆಮ್ಆದ್ಮಿ 3ನೇ ಪಟ್ಟಿ ಬಿಡುಗಡೆ : 28 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌

ಇದನ್ನೂ ಓದಿ : ಅಧಿಕಾರಕ್ಕೆ ಬಂದರೆ ಕೆಎಂಎಫ್‌ ಉನ್ನತೀಕರಣಕ್ಕೆ ಆದ್ಯತೆ : ಕಾಂಗ್ರೆಸ್‌ ಹೊಸ ಭರವಸೆ

JDS Guarantee: Rs 2 lakh grant for married farmers’ children

Comments are closed.