ಬಿಪಿಎಲ್‌ ಕಾರ್ಡುದಾರರಿಗೆ ಅರ್ಧ ಲೀಟರ್‌ ಹಾಲು, ವರ್ಷಕ್ಕೆ 3 ಗ್ಯಾಸ್‌ ಸಿಲಿಂಡರ್‌ ಉಚಿತ: ಬಿಜೆಪಿ ಪ್ರನಾಳಿಕೆಯಲ್ಲಿ ಏನೇನಿದೆ ?

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರನಾಳಿಕೆಯ (Karnataka Assembly Elections – BJP manifesto) ಮೂಲಕ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದೆ. ಬಿಪಿಎಲ್‌ ಕುಟುಂಬಗಳಿಗೆ ನಿತ್ಯವೂ ಅರ್ಧ ಲೀಟರ್‌ ಹಾಲಿನ ಜೊತೆಗೆ ವರ್ಷಕ್ಕೆ ಮೂರು ಗ್ಯಾಸ್‌ ಸಿಲಿಂಡರ್‌ ನೀಡುವುದಾಗಿ ಘೋಷಿಸಿದೆ. ಐದು ಕೆಜಿ ಅಕ್ಕಿಯ ಜೊತೆಗೆ ಸಿರಿಧಾನ್ಯ ನೀಡುವುದಾಗಿ ಹೇಳಿದೆ. ಹಾಗಾದ್ರೆ ಬಿಜೆಪಿಯ ಪ್ರನಾಳಿಕೆಯಲ್ಲಿರುವ ಅಂಶಗಳು ಯಾವುವು ಅನ್ನೋ ಮಾಹಿತಿ ಇಲ್ಲಿದೆ.

ಬಿಜೆಪಿ ಪ್ರನಾಳಿಕೆಯಲ್ಲಿ ಏನಿದೆ ?

  1. ಬಿಪಿಎಲ್​​ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್​ ಸಿಲಿಂಡರ್​ ನೀಡಲಾಗುತ್ತದೆ. ಯುಗಾದಿ, ದೀಪಾವಳಿ ಹಾಗೂ ಗಣೇಶ ಚತುರ್ಥಿಯಂದು ತಲಾ ಒಂದೊಂದು ಗ್ಯಾಸ್‌ ಸಿಲಿಂಡರ್‌ ವಿತರಣೆ ಮಾಡಲಿದೆ.
  2. ಪೋಷಣೆ ಯೋಜನೆಯ ಮೂಲಕ ಬಿಪಿಎಲ್‌ ಕುಟುಂಬಗಳಿಗೆ ನಿತ್ಯವೂ ಅರ್ಧ ಲೀಟರ್‌ ನಂದಿನಿ ಹಾಲು ವಿತರಣೆ ಮಾಡಲಿದೆ. ಅಲ್ಲದೇ ಐದು ಕೆ.ಜಿ. ಅಕ್ಕಿಯ ಜೊತೆಗೆ ಐದು ಕೆಜಿ ಸಿರಿಧಾನ್ಯಗಳನ್ನು ವಿತರಿಸಲಿದೆ.
  3. ಜನರಿಗೆ ಕಡಿಮೆ ದರದಲ್ಲಿ ಆಹಾರ ವಸ್ತುಗಳನ್ನು ಪೂರೈಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್​ ಆಹಾರ ಕೇಂದ್ರ ಸ್ಥಾಪನೆ.
  4. ಒನಕೆ ಓಬವ್ವಸಾಮಾಜಿಕ ನ್ಯಾಯ ನಿಧಿ’ ಯೋಜನೆ ಆರಂಭಿಸಿ, ಈ ಯೋಜನೆಯ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡಲಾಗುತ್ತದೆ.
  5. ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ‘ಸುಲಲಿತ ಜೀವನ’ಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನ.
  6. ಮಿಷನ್ ಸ್ವಾಸ್ಥ್ಯ ಕರ್ನಾಟಕ’ದ ಅಡಿ ಸರ್ಕಾರಿ ಆಸ್ಪತ್ರೆ /ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ.
  7. ಕರ್ನಾಟಕವನ್ನು ಎಲೆಕ್ನಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್ ಗಳನ್ನು ಎಲೆಕ್ನಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ‘ಇಬಿ ಸಿಟಿ’ ಅಭಿವೃದ್ಧಿ.
  8. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್‌ ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ ‘ಉತ್ಪಾದನಾ ಆಧರಿತ ಪ್ರೋತ್ಸಾಹ’ ಯೋಜನೆಯ ವ್ಯಾಪ್ತಿ ವಿಸ್ತರಣೆ.
  9. ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್‌ ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್ ಗಾಣಗಾಪುರ ಕಾರಿಡಾರ್್ರ ಅನ್ನು ಅಭಿವೃದ್ಧಿಪಡಿಸಲು 91,500 ಕೋಟಿ ವಿನಿಯೋಗ.
  10. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 2 30,000 ಕೋಟಿ ಮೊತ್ತದ ‘ಕೆ-ಅಗಿ ಫಂಡ್’ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್ ಗಳ ಸ್ಥಾಪನೆ.
  11. ನಮ್ಮಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ‘ರಾಜ್ಯ ರಾಜಧಾನಿ ಪ್ರದೇಶ’ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
  12. ವಿಶ್ವೇಶ್ವರಯ್ಯ ವಿದ್ಯಾ ಯೋಜನೆ’ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
  13. ಐಎಎಸ್/ಕೆಎಎಸ್/ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
  14. ಸಮನ್ವಯ ಯೋಜನೆ’ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
  15. ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
  16. ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ [ಯುಸಿಸಿ) ಜಾರಿಗೊಳಿಸುತ್ತೇವೆ.

ಇದನ್ನೂ ಓದಿ : ಕರ್ನಾಟಕದ ಮುಂದಿನ ಸಿಎಂ ಹೆಸರು ಘೋಷಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್​​ ಅವರು ಉಪಸ್ಥಿತರಿದ್ದರು.

https://www.youtube.com/live/pC6zUhOMv04?feature=share

Karnataka Assembly Elections – BJP manifesto : Half a liter of milk for BPL card holders, 3 gas cylinders free per year: What is in the BJP manifesto?

Comments are closed.