BIG News : ಜಾತಿಗಣತಿ : ಅಕ್ಟೋಬರ್ 8 ರಿಂದ ಬೆಳಗ್ಗೆ 8 ಗಂಟೆಗೆ ಶಾಲಾರಂಭ : ಆದೇಶ

School timings change : ಬೆಂಗಳೂರು : ದಸರಾ ರಜೆಯ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ ಅಕ್ಟೋಬರ್ 8 ರಿಂದ ಬೆಳಗ್ಗೆ 8 ಗಂಟೆಗೆ ಶಾಲೆಗಳು ಆರಂಭವಾಗಲಿದೆ. ಈ ಕುರಿತು ಕರ್ನಾಟಕ ಶಿಕ್ಷಣ ಇಲಾಖೆಯ ಆಯುಕ್ತರು ಹೊಸ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸರ್ವೆ ಕಾರ್ಯವನ್ನು ಕೈಗೊಂಡಿದೆ. ಆದರೆ ವಿದ್ಯಾರ್ಥಿಗಳು ತಮ್ಮ ಸಮೀಕ್ಷಾ ಕಾರ್ಯವನ್ನು ಅಕ್ಟೋಬರ್ 12ರ ಒಳಗಾಗಿ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿದೆ.
ಜಾತಿಗಣತಿಯ ಕಾರ್ಯದ ಹಿನ್ನೆಲೆಯಲ್ಲಿ ಶಾಲೆಗಳ ಅವಧಿಯಲ್ಲಿ (School timings change) ಅಕ್ಟೋಬರ್ 8ರಿಂದ ಬದಲಾವಣೆಯನ್ನು ಮಾಡಲಾಗಿದೆ. ಗ್ರೇಟ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 8ರಿಂದ ಅಕ್ಟೋಬರ್ 24ರ ವರೆಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಾಲೆ ನಡೆಸಲು ಸೂಚಿಸಲಾಗಿದೆ. ಮಧ್ಯಾಹ್ನದ ನಂತರ ಶಿಕ್ಷಕರು, ಸಿಬ್ಬಂದಿಗಳು ಸಮೀಕ್ಷೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: ದಸರಾ ರಜೆ ವಿಸ್ತರಣೆ, ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್
ಇನ್ನು ಕರ್ನಾಟಕದ ಇತರ ಜಿಲ್ಲೆಗಳಲ್ಲಿನ ಸರಕಾರಿ, ಅನುದಾನಿತ ಶಾಲೆಗಳು ಅಕ್ಟೋಬರ್ 8 ರಿಂದ 12ರ ವರೆಗೆ ನಿತ್ಯವೂ ಬೆಳಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಶಾಲೆಗಳನ್ನು ನಿರ್ವಹಿಸಿ, ನಂತರ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಶಾಲಾ ರಜಾ ದಿನಗಳಲ್ಲಿಯೂ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕದಲ್ಲಿ ಅಕ್ಟೋಬರ್ ಅಕ್ಟೋಬರ್ 12ರ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಸುರಲ್ಕರ್ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಸಿಬಿಎಸ್‌ಇ 2026 ಪರೀಕ್ಷೆ ನಿಯಮದಲ್ಲಿ ಮಹತ್ವದ ಬದಲಾವಣೆ : ಯಾರಿಗೆ ಅನುಕೂಲ ?



