ಸೋಮವಾರ, ಏಪ್ರಿಲ್ 28, 2025
HomeElectionಕರ್ನಾಟಕ ಚುನಾವಣೆ 2023 : ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ

ಕರ್ನಾಟಕ ಚುನಾವಣೆ 2023 : ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ

- Advertisement -

ಶಿವಮೊಗ್ಗ : ರಾಜ್ಯದಲ್ಲಿ ಎಲ್ಲೆಡೆ ಚುನಾವಣೆ ಕಾವೇರಿದೆ. ಆಯಾ ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತ ಬೇಟೆಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ನಡುವಲ್ಲೇ ಕರ್ನಾಟಕದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ತಪ್ಪು ಹೇಳಿಕೆಯಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ (Former minister KS Eshwarappa) ಶಿವಮೊಗ್ಗದಲ್ಲಿ ನಡೆದ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಮತಾಂತರ ವಿಚಾರವಾಗಿ ಮಾತನಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಆಜಾನ್’ಗಾಗಿ ಬಳಸುವ ಧ್ವನಿವರ್ಧಕಗಳ ಬಳಕೆಯನ್ನು ಪ್ರಶ್ನಿಸಿದ್ದಾರೆ ಎಂದು ನಾಯಕ ಹೇಳಿದರು. ಇದು ಜನರಿಗೆ, ವಿಶೇಷವಾಗಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಕಾರಿಡಾರ್‌ನಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಶಿವಮೊಗ್ಗದಲ್ಲಿ ವೀರಶೈವ-ಲಿಂಗಾಯತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ವಿವಾದಿತ ನಾಯಕ, ನಮಗೆ ಒಂದೇ ಒಂದು ಮುಸ್ಲಿಂ ಮತವೂ ಬೇಡ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ : ಪ್ರಮೋದ್‌ ಮಧ್ವರಾಜ್‌ ವಿರುದ್ದ ಟೀಕೆ : ಮೊಗವೀರರ ಕುಲಕಸುಬು ಕೆಣಕಿ ಸಮುದಾಯವನ್ನೇ ಎದುರು ಹಾಕಿಕೊಂಡ್ರಾ ಡಿ.ಕೆ.ಶಿವಕುಮಾರ್‌ ?

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ 2023 : ಯಾರೇ ಗೆದ್ದರೂ ಈ ಬಾರಿಯೂ ಜೆಡಿಎಸ್‌ ಕಿಂಗ್‌ ಮೇಕರ್‌ ?

ಬಿಜೆಪಿಯ ಹಿರಿಯ ನಾಯಕ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸುವುದಾಗಿ ಪಕ್ಷದ ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದರು. ಮೇ 10 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಪರಿಗಣಿಸಬೇಡಿ ಎಂದು ವಿನಂತಿಸಿದ್ದಾರೆ. ಈ ಹಿಂದೆ ಬೆಳಗಾವಿಯಲ್ಲಿ ಸಿವಿಲ್ ಕಾಮಗಾರಿಗೆ ಶೇ.40 ಕಮಿಷನ್‌ಗೆ ಬೇಡಿಕೆಯಿಟ್ಟಿದ್ದಾರೆ ಎಂದು ತಮ್ಮ ಆತ್ಮಹತ್ಯಾ ಪತ್ರದಲ್ಲಿ ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಹೊಟೇಲ್ ಕೊಠಡಿಯಲ್ಲಿ ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ : Modi Surname Case : ಮೇ 15ರವರೆಗೆ ಕಾಂಗ್ರೆಸ್‌ ರಾಹುಲ್ ಗಾಂಧಿಗೆ ರಿಲೀಫ್ ನೀಡಿದ ಪಾಟ್ನಾ ಹೈಕೋರ್ಟ್

Karnataka Election 2023: Former minister KS Eshwarappa made a controversial statement

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular