ಕರ್ನಾಟಕ ವಿಧಾನಸಭಾ ಚುನಾವಣೆ : ಇಂದು ಮತದಾನ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ 2023 ಕ್ಕೆ (Karnataka Election 2023 Live) ಇಂದು ಮತದಾನ ನಡೆಯಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 2,615 ಮಂದಿ ಕಣದಲ್ಲಿದ್ದಾರೆ. ಬೆಳಗಿನಿಂದಲೇ ಮತದಾರರು ಹುಮ್ಮಸ್ಸಿನಿಂದಲೇ ಮತಕೇಂದ್ರಕ್ಕೆ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ರಾಜ್ಯದ ಹಲವೆಡೆ ಬಿಸಿಲಧಗೆಗೆ ಮತದಾರರು ಬೇಸತ್ತು ಹೋಗಿದ್ದಾರೆ. ಹೀಗಾಗಿ ಬೆಳಗಿನಿಂದಲೇ ಮತದಾರರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ರಾಜಕೀಯ ಮುಖಂಡರು, ಸಿನಿಮಾ ನಟ, ನಟಿಯರು ಕೂಡ ಬೆಳಗ್ಗೆಯೇ ಮತದಾನ ಮಾಡಿದ್ದಾರೆ. ಆದರೆ ಬಿಸಿಲ ಬೇಗೆಯಿಂದಾಗಿ ಈ ಬಾರಿ ಮತದಾನದ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅಗತ್ಯಕ್ರಮಗಳನ್ನು ಕೈಗೊಂಡಿದೆ.

ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳಿದ್ದು, ಇವುಗಳಲ್ಲಿ 28,866 ನಗರ ಪ್ರದೇಶಗಳಲ್ಲಿದ್ದು. ಪ್ರತಿ ಮತಗಟ್ಟೆಗೆ ಸರಾಸರಿ ಮತದಾರರ ಸಂಖ್ಯೆ 883. ಭಾರತೀಯ ಚುನಾವಣಾ ಆಯೋಗವು ಸೂಕ್ಷ್ಮ ಬೂತ್‌ಗಳನ್ನು ಗುರುತಿಸಿದೆ. ಅಲ್ಲಿ ಮೂರು-ಮುಖ ವಿಧಾನವನ್ನು ನಿಯೋಜಿಸುವುದಾಗಿ ಹೇಳಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ 9.17 ಲಕ್ಷ ಮತದಾರರಿದ್ದಾರೆ. ಮೊದಲ ಬಾರಿಗೆ, ಮುಂಬರುವ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಅಂಗವಿಕಲರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ.

ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯಲ್ಲಿ (Karnataka Election 2023 Live) ಒಟ್ಟು 5.21 ಕೋಟಿ ಮತದಾರರಿದ್ದು, ಇದರಲ್ಲಿ 2.59 ಮಹಿಳಾ ಮತದಾರರು ಮತ್ತು 2.62 ಕೋಟಿ ಪುರುಷ ಮತದಾರರಿದ್ದಾರೆ. ಒಟ್ಟು ಮತದಾರರಲ್ಲಿ 16,976 ಮಂದಿ 100 ವರ್ಷ ಮೇಲ್ಪಟ್ಟವರು, 4,699 ಮಂದಿ ತೃತೀಯಲಿಂಗಿಗಳು ಮತ್ತು 9.17 ಲಕ್ಷ ಮಂದಿ ಪ್ರಥಮ ಬಾರಿ ಮತದಾರರು. ದುರ್ಬಲ ಬುಡಕಟ್ಟು ಗುಂಪುಗಳು ಮತ್ತು ಟ್ರಾನ್ಸ್‌ಜೆಂಡರ್‌ ಗಳಿಗಾಗಿ ವಿಶೇಷ ಬೂತ್‌ಗಳನ್ನು ಸ್ಥಾಪಿಸುವುದಾಗಿ ಚುನಾವಣಾ ಆಯೋಗ ಹೇಳಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ 9.17 ಲಕ್ಷ ಮತದಾರರಿದ್ದಾರೆ. ಮೊದಲ ಬಾರಿಗೆ, ಮುಂಬರುವ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಜನರು ಮತ್ತು ಅಂಗವಿಕಲರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ : ಕರ್ನಾಟಕ ಚುನಾವಣೆ 2023 : ಮತದಾನದ ದಿನಾಂಕ, ಫಲಿತಾಂಶ, ಪ್ರಮುಖ ಕ್ಷೇತ್ರಗಳು ಇಲ್ಲಿದೆ ಸಂಪೂರ್ಣ ವಿವರ

ಇದನ್ನೂ ಓದಿ : Sringeri : ಚುನಾವಣಾ ಕರ್ತವ್ಯ ಲೋಪ : ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಮಾನತ್ತು

Comments are closed.