Karnataka Election Result 2023 : ಕಾಂಗ್ರೆಸ್‌ 103, ಬಿಜೆಪಿ 80, ಜೆಡಿಎಸ್‌ 34 ಮುನ್ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ (Karnataka Election Result 2023) ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುತೇಕ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಕಾಂಗ್ರೆಸ್‌ 103, ಬಿಜೆಪಿ 80, ಜೆಡಿಎಸ್‌ 34 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇನ್ನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ : ಮಾಡಿದ್ದ ಆರ್.‌ ಅಶೋಕ್‌ ಹಾಗೂ ವಿ.ಸೋಮಣ್ಣ ಅವರಿಗೆ ಹಿನ್ನಡೆಯಾಗಿದೆ. ಬಿಜೆಪಿ ತೊರೆದು ಹೊಸ ಪಕ್ಷ ಕಟ್ಟಿದ್ದ ಗಾಲಿ ಜನಾರ್ಧನ ರೆಡ್ಡಿ ಹಾಗೂ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಜಗದೀಶ್‌ ಶಟ್ಟರ್‌ ಹಾಗೂ ಲಕ್ಷ್ಮಣ ಸವದಿ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Karnataka Election Result 2023 : ಚುನಾವಣೆಯ ಕುರಿತು ಕ್ಷಣಕ್ಷಣದ ಅಪ್ಡೇಟ್ಸ್‌ಗಾಗಿ ನ್ಯೂಸ್‌ನೆಕ್ಸ್ಟ್‌ ವೀಕ್ಷಿಸಿ :

ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಕಾರ್ಯ ಈಗಾಗಲೇ ಮುಕ್ತಾಯವಾಗಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಮೊದಲ ಸುತ್ತಿನ ಮತ ಎಣಿಕೆ ಕಾರ್ಯವೂ ಪೂರ್ಣಗೊಂಡಿದೆ. ಬಹುತೇಕ ಹಾಲಿ ಶಾಸಕರಿಗೆ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನಡೆಯನ್ನು ಅನುಭವಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದ್ದು, ಸಂಜೆಯ ಹೊತ್ತಿಗೆ ರಾಜ್ಯ ಸರಕಾರದ ಸಂಪೂರ್ಣ ಭವಿಷ್ಯ ನಿರ್ಧಾರವಾಗಲಿದೆ. ಮತ ಎಣಿಕೆ ನಡೆಯುವ ಕೇಂದ್ರದ 100 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಇದನ್ನೂ ಓದಿ : ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಹಿನ್ನಡೆ, ವಿಜಯೇಂದ್ರಗೆ ಮುನ್ನಡೆ

ಇದನ್ನೂ ಓದಿ : ಉಡುಪಿಯಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ

ಇದನ್ನೂ ಓದಿ : ಕರ್ನಾಟಕ ಚುನಾವಣೆ ಮತ ಎಣಿಕೆ ಆರಂಭ : ಬಿಜೆಪಿ, ಕಾಂಗ್ರೆಸ್‌ ಸಮಬಲದ ಪೈಪೋಟಿ

ಈಗಾಗಲೇ ಚುನಾವಣೋತ್ತರ ಸಮೀಕ್ಷೆಗಳ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಸೋಲು ಗೆಲುವಿನ ಲೆಕ್ಕಾಚಾರವನ್ನು ಶುರು ಮಾಡಿವೆ. ಹಲವು ಸಮೀಕ್ಷೆಗಳು ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದರೆ, ಇನ್ನು ಕೆಲವು ಸಮೀಕ್ಷೆಗಳು ಬಿಜೆಪಿ ಪರ ಒಲವು ವ್ಯಕ್ತಪಡಿಸಿವೆ. ಜೊತೆಗೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಲಿದೆ ಅನ್ನೋದನ್ನು ಸಮೀಕ್ಷೆಗಳು ಹೇಳಿರುವ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿಯೇ ನಡೆಯುತ್ತಿವೆ.

Karnataka Election Result 2023 : Congress 103, BJP 80, JDS 34 lead

Comments are closed.