ಉಡುಪಿಯಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ

ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ (Karnataka election result) ಆರಂಭವಾಗಿದೆ. ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಉಡುಪಿ ಜಿಲ್ಲೆಲ್ಲಿ ಬಿಜೆಪಿ 3, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಸದ್ಯದ ವರದಿ ಪ್ರಕಾರ ಕುಂದಾಪುರ, ಕಾರ್ಕಳ, ಉಡುಪಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾರ್ಕಳ ಹಾಗೂ ಕಾಪುವಿನಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಎರಡೂ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. 224 ಸ್ಥಾನಗಳ ಕರ್ನಾಟಕ ವಿಧಾನಸಭೆಯಲ್ಲಿ ಸರಕಾರ ರಚಿಸಲು ಪಕ್ಷ 113 ಸ್ಥಾನಗಳನ್ನು ಗೆಲ್ಲಬೇಕಾಗಿದೆ. ಒಟ್ಟು 224 ಸ್ಥಾನಗಳಲ್ಲಿ 36 ಸ್ಥಾನಗಳನ್ನು ಪರಿಶಿಷ್ಟ ಜಾತಿಗೆ ಮತ್ತು 15 ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ.

ಎಲ್ಲೆಲ್ಲಿ ನಡೆಯುತ್ತೆ ಮತ ಎಣಿಕೆಯ ಕಾರ್ಯ ?

ಬಿಎಂಎಸ್ ಮಹಿಳಾ ಕಾಲೇಜು ಬಸವನಗುಡಿ (ಬೆಂಗಳೂರು ಕೇಂದ್ರ), ಮೌಂಟ್ ಕಾರ್ವೆಲ್ ಪಿಯು ಕಾಲೇಜು(ಬಿಬಿಎಂಪಿ ಉತ್ತರ), ಎಸ್​ಎಸ್​ಎಂಆರ್​ವಿ ಪಿಯು ಕಾಲೇಜು ಜಯನಗರ (ಬೆಂಗಳೂರು ದಕ್ಷಿಣ), ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮತ್ತು ಕಾಂಪೋಜಿಟ್ ಪಿಯು ಕಾಲೇಜು(ಬೆಂಗಳೂರು ನಗರ), ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ರಾಮನಗರ, ಮಂಡ್ಯ ವಿಶ್ವವಿದ್ಯಾಲಯ ಮಂಡ್ಯ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಸನ, ರಾಣಿ ಪಾರ್ವತಿ ದೇವಿ ಕಾಲೇಜು ಬೆಳಗಾವಿ, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಸೈನಿಕ ಶಾಲೆ, ವಿಜಯಪುರ, ಸರ್ಕಾರಿ ಪಿಯು ಕಾಲೇಜು ಯಾದಗಿರಿ, ಕಲಬುರಗಿ ವಿಶ್ವವಿದ್ಯಾಲಯ, ಐಡಿಎಸ್​ಜಿ ಸರ್ಕಾರಿ ಕಾಲೇಜು ಚಿಕ್ಕಮಗಳೂರು, ತುಮಕೂರು ವಿಶ್ವವಿದ್ಯಾಲಯ ತುಮಕೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಬಳ್ಳಾಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಲಾರ, ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್(ದಕ್ಷಿಣ ಕನ್ನಡ), ಸೇಂಟ್ ಜೋಸೆಫ್ ಕಾನ್ವೆಂಟ್ ಕೊಡಗು, ಸರ್ಕಾರಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ವೆುಂಟ್ ಕಾಲೇಜು ಮೈಸೂರು ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಚಾಮರಾಜನಗರ, ಕಲಬುರಗಿ, ಬಿ.ವಿ.ಬಿ. ಕಾಲೇಜು ಬೀದರ್, ಎಸ್​ಆರ್‌ಪಿಎಸ್ ಪಿಯು ಕಾಲೇಜು ರಾಯಚೂರು, ಶ್ರೀ ಗವಿಸಿದ್ದೇಶ್ವರ ಕಾಲೇಜು ಕೊಪ್ಪಳ, ಶ್ರೀ ಜಗದದ್ಗುರು ತೋಂಟದಾರ್ಯ ಕಲೆ, ವಿಜ್ಞಾನ, ವಾಣಿಜ್ಯ ಕಾಲೇಜು ಗದಗ, ಕೃಷಿ ವಿಶ್ವವಿದ್ಯಾಲಯ ಧಾರವಾಡ, ಡಾ.ಎ.ವಿ. ಬಾಳಿಗ ಕಲೆ, ವಿಜ್ಞಾನ ಕಾಲೇಜು ಕುಮಟಾ(ಉತ್ತರ ಕನ್ನಡ), ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾವೇರಿ, ಪ್ರೌಢ ದೇವರಾಯ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹೊಸಪೇಟೆ(ವಿಜಯನಗರ ಜಿಲ್ಲೆ), ರಾವ್ ಬಹುದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಬಳ್ಳಾರಿ, ಸರ್ಕಾರಿ ವಿಜ್ಞಾನ ಕಾಲೇಜು ಚಿತ್ರದುರ್ಗ, ಶಿವಗಂಗೋತ್ರಿ ವಿಶ್ವವಿದ್ಯಾಲಯ ದಾವಣಗೆರೆ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ, ಸೇಂಟ್ ಸೆಸಿಲೀಸ್ ಗ್ರೂಪ್ ಆಫ್ ಇನ್​ಸ್ಟಿಟ್ಯೂಟ್ಸ್ ಉಡುಪಿಯಲ್ಲಿ ನಡೆಯಲಿದೆ.

ಇದನ್ನೂ ಓದಿ : ಕರ್ನಾಟಕ ವಿಧಾನಸಭೆ ಚುನಾವಣೆ : ಹೇಗೆ ನಡೆಯುತ್ತೆ ಮತ ಎಣಿಕೆ ?

ಇದನ್ನೂ ಓದಿ : ಕರ್ನಾಟಕ ಚುನಾವಣೆ ಮತ ಎಣಿಕೆ ಆರಂಭ : ಬಿಜೆಪಿ, ಕಾಂಗ್ರೆಸ್‌ ಸಮಬಲದ ಪೈಪೋಟಿ

Karnataka election result: BJP 3, Congress 2 lead in Udupi

Comments are closed.