ಬಿಜೆಪಿಗೆ ಬಹುಮತ ಬಂದ್ರೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ : ಏನಿದು ಬಿಜೆಪಿ ಲೆಕ್ಕಾಚಾರ ?

ಬೆಂಗಳೂರು : (Karnataka Election-Shobha Karandlaje) ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು 25 ದಿನಗಳು ಮಾತ್ರವೇ ಬಾಕಿ ಉಳಿದಿದೆ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಚುನಾವಣೆಗಾಗಿ ಕಸರತ್ತು ನಡೆಸುತ್ತಿವೆ. ಆದರೆ ಕೆಲವು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳೇ ಅಂತಿಮಗೊಂಡಿಲ್ಲ. ಈ ನಡುವಲ್ಲೇ ಬಿಜೆಪಿ ಪಕ್ಷದಲ್ಲೀಗ ಸಿಎಂ ಅಭ್ಯರ್ಥಿಗಳ ಕುರಿತು ಚರ್ಚೆ ಶುರುವಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಅದ್ರಲ್ಲೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬಂದ್ರೆ ಶೋಭಾ ಕರಂದ್ಲಾಜೆ ರಾಜ್ಯದ ಮುಖ್ಯಮಂತ್ರಿ ಆಗ್ತಾರಂತೆ.

ಉಡುಪಿ-ಚಿಕ್ಕಮಗಳೂರಿನಿಂದ ಎರಡು ಬಾರಿ ಸಂಸದರಾಗಿ ಶೋಭಾ ಕರಂದ್ಲಾಜೆ ಆಯ್ಕೆಯಾಗಿದ್ದಾರೆ. ಅಲ್ಲದೇ ಸದ್ಯ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೋಭಾ ಕರಂದ್ಲಾಜೆ ಲೋಕಸಭೆ ಪ್ರವೇಶಕ್ಕೂ ಮೊದಲೇ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ರಾಜ್ಯದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದಾರೆ. ಇದೀಗ ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆ ದೊರೆತಿದೆ. ಸದ್ಯ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಸಿಎಂ ರೇಸ್‌ನಿಂದ ಹೊರಬಿದ್ದಿದ್ದಾರೆ. ಇನ್ನು ಬಸವರಾಜ್‌ ಬೊಮ್ಮಾಯಿ ಮತ್ತೊಂದು ಅವಧಿಗೆ ಸಿಎಂ ಆಗುವುದು ಅನುಮಾನ. ಇನ್ನೊಂದೆಡೆಯಲ್ಲಿ ಬಿ.ಎಲ್.ಸಂತೋಷ್‌, ಪ್ರತಾತ್‌ ಸಿಂಹ, ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ ಅವರ ಹೆಸರುಗಳು ಕೂಡ ಸಿಎಂ ರೇಸ್‌ನಲ್ಲಿದೆ. ಆದ್ರೀಗ ಶೋಭಾ ಕರಂದ್ಲಾಜೆ ಹೆಸರು ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿರಿಯ ಶಾಸಕರಿಗೆ ಕೋಕ್‌ ಕೊಟ್ಟಿದೆ. ಬಹುತೇಕ ಯುವ ಶಾಸಕರೇ ಈ ಬಾರಿ ಆಯ್ಕೆಯಾಗಿ ಬರುವ ಸಾಧ್ಯತೆಯಿದೆ. ಕರ್ನಾಟಕಕ್ಕೆ ಮಹಿಳಾ ಮುಖ್ಯಮಂತ್ರಿಯನ್ನು ನೀಡುವುದಾಗಿ ಈಗಾಗಲೇ ಬಿಜೆಪಿ ಘೋಷಿಸಿದೆ. ಇನ್ನೊಂದೆಡೆಯಲ್ಲಿ ಶೋಭಾ ಕರಂದ್ಲಾಜೆ ಒಕ್ಕಲಿಗ ಸಮುದಾಯದವರು. ಹೀಗಾಗಿ ಶೋಭಾ ಕರಂದ್ಲಾಜೆ ಅವರನ್ನು ಸಿಎಂ ಮಾಡಿ, ಲಿಂಗಾಯಿತ ಸಮುದಾಯದವರನ್ನು ಡಿಸಿಎಂ ಮಾಡುವ ಲೆಕ್ಕಾಚಾರದಲ್ಲಿದೆ ಬಿಜೆಪಿ. ಒಂದೊಮ್ಮೆ ಶೋಭಾ ಕರಂದ್ಲಾಜೆ ಅವರನ್ನು ಸಿಎಂ ಮಾಡಿದ್ರೆ ಮಹಿಳಾ ಪ್ರಾತಿನಿಧ್ಯದ ಜೊತೆಗೆ ಒಕ್ಕಲಿಗರ ವಿರೋಧಿ ಅನ್ನೋ ಹಣೆಪಟ್ಟಿ ಕಳಚಲು ಬಿಜೆಪಿ ಫ್ಲ್ಯಾನ್‌ ರೂಪಿಸಿದೆ. ಇನ್ನೊಂದೆಡೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಶೋಭಾ ಕರಂದ್ಲಾಜೆ ಅವರ ಮೂಲಕ ಯಡಿಯೂರಪ್ಪ ಅವರ ಮುನಿಸು ಕಡಿಮೆ ಮಾಡಿ, ಪಕ್ಷದಲ್ಲಿ ಸಕ್ರೀಯವಾಗಿ ಇರುವಂತೆ ನೋಡುವ ಲೆಕ್ಕಾಚಾರದಲ್ಲಿದೆ.

ಇದನ್ನೂ ಓದಿ : Baburao Chinchansur : ಗುರುಮಿಟ್ಕಲ್ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ

ಇದನ್ನೂ ಓದಿ : Goolihatti Shekhar resigns : ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ರಾಜೀನಾಮೆ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಈ ಹಿಂದಿನ ಚುನಾವಣೆಗಳಲ್ಲಿ ಒಕ್ಕಲಿಗ ಸಮುದಾಯ ಹೆಚ್ಚಾಗಿ ಬಿಜೆಪಿ ಪರ ಒಲವು ತೋರಿಲ್ಲ. ಹಳೆ ಮೈಸೂರು ಭಾಗದಲ್ಲಿಯೂ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆಯಲ್ಲಿ ಒಕ್ಕಲಿಗ ಅಭ್ಯರ್ಥಿಗಳಿಗೆ ಬಿಜೆಪಿ ಹೆಚ್ಚಾಗಿ ಮಣೆ ಹಾಕಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಬಹುಮತವನ್ನು ಪಡೆದುಕೊಂಡ್ರೆ ಶೋಭಾ ಕರಂದ್ಲಾಜೆ ರಾಜ್ಯದ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿಬರುತ್ತಿದೆ.

ಇದನ್ನೂ ಓದಿ : ಬಿಜೆಪಿಯಲ್ಲಿ ಹಾರಿದ ಬಂಡಾಯದ ಬಾವುಟ : ಹೆಚ್ಚುತ್ತಿದೆ ಕರ್ನಾಟಕ ಕುರುಕ್ಷೇತ್ರದ ಕೌತುಕತೆ

Karnataka Election-Shobha Karandlaje: Majority for BJP Bandre Shobha Karandlaje Chief Minister: What is BJP’s calculation?

Comments are closed.