Karnataka MLA Election 2023 : ಕರ್ನಾಟಕ ಚುನಾವಣೆ : ರಾಜ್ಯ ಚುನಾವಣಾ ಮುಖ್ಯ ಆಯುಕ್ತರಿಂದ ಇಂದು ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka MLA Election 2023) ಮುಹೂರ್ತ ಫಿಕ್ಸ್ ಆಗಿದ್ದು, 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ವಿಧಾನಸೌಧದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆಗೆ ದಿನಾಂಕ ನಿಗದಿಯಾಗಿದ್ದು, 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ವಿಧಾನಸೌಧದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತಂತೆ ಹಲವು ಮಾಹಿತಿಗಳನ್ನು ನೀಡಲಿದ್ದಾರೆ. ಮೇ 10 ರಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ದಿನಾಂಕ ನಿಗದಿಯಾಗಿದ್ದು, ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಕೂಡ ಜಾರಿಯಾಗಿದೆ. ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರಿಕೆ ಸಲ್ಲಿಕೆ ಪ್ರಾರಂಭವಾಗಲಿದ್ದು, ಏಪ್ರಿಲ್‌ 20 ರಂದು ಕೊನೆಯ ದಿನವಾಗಿದೆ. ಇನ್ನೂ ಏಪ್ರಿಲ್‌ 21 ರೊಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯುವುದಕ್ಕೆ ಏಪ್ರಿಲ್‌ 24 ಕೊನೆಯ ದಿನವಾಗಿದೆ. ಕಳೆದ ಚುನಾವಣೆಯಂತೆ ಈ ಬಾರಿಯೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಮೇ 24 ಕ್ಕೆ ಕರ್ನಾಟಕ ವಿಧಾನಸಭೆ ಅವಧಿ ಮುಗಿಯಲಿದ್ದು, ರಾಜ್ಯದಲ್ಲಿ ಒಟ್ಟು 58, ಸಾವಿರ ಮತಗಟ್ಟೆಗಳಿದ್ದು, 34219 ಗ್ರಾಮೀಣ ಮತಗಟ್ಟೆ, 20063 ನಗರ ಮತಗಟ್ಟೆ, 1320 ಮಹಿಳಾ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 5.21 ಕೋಟಿ ಮತದಾರರಿಂದ ಈ ಬಾರಿ ಮತದಾನ ನಡೆಯಲಿದೆ. 2.62 ಕೋಟಿ ಪುರುಷರು, 2.59 ಕೋಟಿ ಮಹಿಳೆಯರು, 5 ಲಕ್ಷ ವಿಕಲ ಚೇತನ ಮತದಾರರು, 4,699 ತೃತಿಯಲಿಂಗಿ ಮತದಾರರಿದ್ದು, 9.17 ಲಕ್ಷ ಯುವ ಸಮೂಹದಿಂದ ಮತದಾನ ನಡೆಯಲಿದೆ. ಈ ಬಾರಿ ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಿಬ್ಬಂದಿಯೇ ಮನೆಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ. ಅದೇ ಗೌಪ್ಯತೆಯೊಂದಿಗೆ ಮನೆಯಲ್ಲಿಯೇ ಮತದಾನ ನಡೆಯಲಿದೆ. ಏಪ್ರಿಲ್‌ 1 ಕ್ಕೆ 18 ವರ್ಷ ತುಂಬಿದವರಿಗೂ ಮತದಾನಕ್ಕೆ ಅರ್ಹರಾಗಿರುತ್ತಾರೆ.

ಇದನ್ನೂ ಓದಿ : Karnataka Election date announce : ಮೇ 10 ಕ್ಕೆ ಚುನಾವಣೆ : 13 ಕ್ಕೆ ಚುನಾವಣಾ ಫಲಿತಾಂಶ

ಇದನ್ನೂ ಓದಿ : Karnataka MLA Election : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಮೇ 10 ಕ್ಕೆ ಚುನಾವಣೆ

ಇದನ್ನೂ ಓದಿ : ಕರ್ನಾಟಕ ಚುನಾವಣಾ ಪ್ರಕಟಣೆ : 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

Karnataka MLA Election 2023: Karnataka Election: Important press conference today by the Chief Election Commissioner of the state

Comments are closed.